ಚಂದ್ರಶೇಖರ ಕಂಬಾರ

ಸಾಹಿತ್ಯ, ಸಿನಿಮಾ, ರಂಗಭೂಮಿ, ಸಂಗೀತ, ಜಾನಪದ, ಅಧ್ಯಾಪನ, ಆಡಳಿತ  ಹೀಗೆ ವಿವಿಧಮುಖೀ ವಿದ್ವಾಂಸರಾದ   ಚಂದ್ರಶೇಖರ ಕಂಬಾರರು ಜನಿಸಿದ್ದು 1937 ಜನವರಿ 2ರಂದು,  ಬೆಳಗಾವಿ ಜಿಲ್ಲೆಯ ಘೋಡಗೇರಿಯಲ್ಲಿ.  ಅವರ ವಿದ್ಯಾಬ್ಯಾಸ ಗೋಕಾಕ್, ಬೆಳಗಾವಿ ಮತ್ತು ಧಾರವಾಡದಲ್ಲಿ ನಡೆಯಿತು.  ಗೋಕಾಕ ಮತ್ತು ಬೆಳಗಾವಿಯ ಬ್ರಿಟಿಷರ ಭಯದ ನೆರಳು ಆವರಿಸಿದ್ದ ಪರಿಸರದಿಂದ ಲೇಖಕನಾಗಿ […]

ಗಿರೀಶ್ ಕಾರ್ನಾಡ್

ಗಿರೀಶ್ ಕಾರ್ನಾಡ್  ಎಲ್ಲಾ ಸೀಮೆಗಳನ್ನೂ ಮೀರಿದ ಮಹಾನ್ ಪ್ರತಿಭೆ.  ಕನ್ನಡದಲ್ಲಿ ನಾಟಕ ಸಾಹಿತ್ಯಕಾರರಾಗಿ, ಪ್ರಸಿದ್ಧ ರಂಗಭೂಮಿ ತಜ್ಞರಾಗಿ, ನಾಟಕಕಾರರಾಗಿ, ಚಲನಚಿತ್ರರಂಗದ ನಟರಾಗಿ, ನಿರ್ದೇಶಕರಾಗಿ, ಪ್ರಾಚಾರ್ಯರಾಗಿ, ಸಂಗೀತ ನಾಟಕ ಅಕಾಡೆಮಿಗಳ ಅಧ್ಯಕ್ಷರಾಗಿ ಹೀಗೆ ಅವರು ಹಲವು ರಂಗಗಳಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧರು. ಕತೆ, ವಿಮರ್ಶೆ ಮತ್ತು […]

ಯು.ಆರ್. ಅನಂತಮೂರ್ತಿ

ತಮ್ಮ ಸಮಕಾಲೀನ ಬರಹಗಾರರಲ್ಲಿ ಅದಮ್ಯ ಚೇತನದ, ಬಹುಪ್ರತಿಭೆಯ ಯು.ಆರ್. ಅನಂತಮೂರ್ತಿ ಅವರು. ಉಡುಪಿ ರಾಜಗೋಪಾಲಾಚಾರ್ಯ-ಸತ್ಯಮ್ಮ ದಂಪತಿಗಳ ಹಿರಿಯ ಪುತ್ರರಾಗಿ ೨೧-೧೨-೧೯೩೨ರಲ್ಲಿ ತೀರ್ಥಹಳ್ಳಿಯ ಮೇಳಿಗೆಯಲ್ಲಿ ಮಲೆನಾಡಿಗರಾಗಿ ಜನಿಸಿದರು. ದೂರ್ವಾಸಪುರದಲ್ಲಿ ಸಾಂಪ್ರದಾಯಿಕ ಪದ್ಧತಿಯಲ್ಲಿ ಸಂಸ್ಕೃತ ಕಲಿತು ಶಾಲಾ ಶಿಕ್ಷಣವನ್ನು ತೀರ್ಥಹಳ್ಳಿಯಲ್ಲಿ ಪಡೆದು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎ. ಪದವಿ ಗಳಿಸಿದರು. ೧೯೬೬ರಲ್ಲಿ ಬರ್ಮಿಂಗ್ […]

ವಿ.ಕೃ. ಗೋಕಾಕ್

ವಿ.ಕೃ. ಗೋಕಾಕ್ ಕನ್ನಡದಲ್ಲಿ ನವ್ಯಕಾವ್ಯ ಪ್ರವರ್ತಕರಾಗಿ ‘ವಿನಾಯಕ’ ಕಾವ್ಯನಾಮದಿಂದ ಕೃತಿಗಳ ರಚನೆ ಮಾಡಿರುವ ವಿನಾಯಕ ಕೃಷ್ಣ ಗೋಕಾಕರು ಕೃಷ್ಣರಾಯ-ಸುಂದರಮ್ಮ ದಂಪತಿಗಳಿಗೆ ೯-೮-೧೯0೯ರಲ್ಲಿ ಜನಿಸಿದರು. ಸವಣೂರಿನಲ್ಲಿ ಶಾಲಾ ವಿದ್ಯಾಭ್ಯಾಸ ಮುಗಿಸಿ ಧಾರವಾಡದಲ್ಲಿ ಕರ್ನಾಟಕ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದು. ೧೯೩೧ರಲ್ಲಿ ಪುಣೆಯ ಫಗ್ರ್ಯುಸನ್  ಕಾಲೇಜಿನಲ್ಲಿ ಅನಂತರ ಆಕ್ಸ್‍ಫರ್ಡ್ ವಿಶ್ವವಿದ್ಯಾನಿಲಯದಲ್ಲಿ ಎಂ.ಎ. […]

ಮಾಸ್ತಿ ವೆಂಕಟೇಶ ಅಯ್ಯಂಗಾರ್

‘ಕನ್ನಡದ ಆಸ್ತಿ’ ಎಂದೇ ಪರಿಗಣಿತರಾದ ಶ್ರೀನಿವಾಸ’ ಕಾವ್ಯನಾಮದ ಮಾಸ್ತಿ ಅವರು ಕೋಲಾರದ ಮಾಲೂರಿನ ಮಾಸ್ತಿ ಗ್ರಾಮದಲ್ಲಿ ರಾಮಸ್ವಾಮಿ ಅಯ್ಯಂಗಾರ್ – ತಿರುಮಲ್ಲಮ್ಮ ದಂಪತಿಗಳಿಗೆ ೮-೬-೧೮೯೧ರಲ್ಲಿ ಜನಿಸಿದರು. ಪ್ರೌಢವಿದ್ಯಾಭ್ಯಾಸವನ್ನು ಮೈಸೂರಿನ ವೆಸ್ಲಿಯನ್ ಹೈಸ್ಕೂಲಿನಲ್ಲೂ, ಎಫ್.ಎ. ಅನ್ನು ಮಹಾರಾಜ ಕಾಲೇಜಿನಲ್ಲೂ ಮುಗಿಸಿ ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಬಿ.ಎ ಮುಗಿಸಿ ಮದರಾಸಿನ ಪ್ರೆಸಿಡೆನ್ಸಿ […]

ಶಿವರಾಮ ಕಾರಂತ

ಕೋಟ ಶಿವರಾಮಕಾರಂತ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಷ ಕಾರಂತ-ಲಕ್ಷ್ಮಮ್ಮ ದಂಪತಿಗಳಿಗೆ ೧0-೧0-೧೯0೨ರಲ್ಲಿ ಜನಿಸಿದರು. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿ ಓದಿಗೆ ಮಂಗಳ ಹಾಡಿದರು. ಆಡು ಮುಟ್ಟದ […]

ದ.ರಾ. ಬೇಂದ್ರೆ

ಕನ್ನಡದ ವರಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರು ರಾಮಚಂದ್ರ ಬೇಂದ್ರೆ-ಅಂಬವ್ವನವರ ಪುತ್ರರಾಗಿ ೩೧-೧-೧೮೯೬ರಲ್ಲಿ ಧಾರವಾಡದಲ್ಲಿ ಜನಿಸಿದರು. ಧಾರವಾಡದಲ್ಲಿ ೧೯೧೩ರಲ್ಲಿ ಮೆಟ್ರಿಕ್ ಮುಗಿಸಿದ ಮೇಲೆ ಪುಣೆಯ ಫರ್ಗ್ಯುಸನ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ೧೯೧೮ರಲ್ಲಿ ಬಿ.ಎ. ಮಾಡಿದರು. ಕೆಲವು ಕಾಲ ಅಧ್ಯಾಪಕ ವೃತ್ತಿ ಮಾಡಿದ ಮೇಲೆ ೧೯೩೫ರಲ್ಲಿ ಮುಂಬಯಿ ವಿಶ್ವವಿದ್ಯಾನಿಲಯದಿಂದ ಎಂ.ಎ. […]

ಕೆ.ವಿ. ಪುಟ್ಟಪ್ಪ

ಕನ್ನಡದ ಮಹಾಕವಿ ಕುವೆಂಪು (ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ) ವೆಂಕಟಪ್ಪಗೌಡ- ಸೀತಮ್ಮ ದಂಪತಿಗಳಿಗೆ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿಯಲ್ಲಿ ೨೯-೧೨-೧೯0೪ರಲ್ಲಿ ಜನಿಸಿದರು. ೧೯೧೬ರಲ್ಲಿ ಮನೆಯಲ್ಲೇ ಖಾಸಗಿ ಮೇಷ್ಟರ ಮೂಲಕ ಪ್ರಾರಂಭಿಕ ವಿದ್ಯಾಭ್ಯಾಸದ ನಂತರ ತೀರ್ಥಹಳ್ಳಿಯಲ್ಲಿ ವಿದ್ಯಾಭ್ಯಾಸ ಮುಗಿಸಿ ಮೈಸೂರಿನಲ್ಲಿ ವೆಸ್ಲಿಯನ್ ಮಿಷನ್ ಹೈಸ್ಕೂಲ್, ಮಹಾರಾಜ ಕಾಲೇಜುಗಳಲ್ಲಿ ಓದಿ ೧೯೨೯ರಲ್ಲಿ ಎಂ.ಎ. ಪದವಿ […]