ಎಂ. ಚಿದಾನಂದಮೂರ್ತಿಗಳಿಗೆ ನೃಪತುಂಗ ಪ್ರಶಸ್ತಿ

M Chidanandamurthy (1)

ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಯು ೨೦೧೬ನೇ ಸಾಲಿಗೆ ಕನ್ನಡದ ಶ್ರೇಷ್ಠ ವಿದ್ವಾಂಸರು, ಕನ್ನಡಪರ ಹೋರಾಟಗಾರರು, ಖ್ಯಾತ ಹಿರಿಯ ಸಂಶೋಧಕರಾದ ನಾಡೋಜ ಡಾ. ಎಂ. ಚಿದಾನಂದಮೂರ್ತಿ ಅವರಿಗೆ ಸಂದಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕಸಾಪದಲ್ಲಿರಿಸಿರುವ 1.5 ಕೋಟಿ ರೂ. ದತ್ತಿಯ ಮೂಲಕ ಕನ್ನಡದ ಗಣ್ಯ ಸಾಧಕರಿಗೆ ನೃಪತುಂಗ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮನು ಬಳಿಗಾರ್, ಹಿರಿಯ ಕವಿ ಡಾ. ಸಿದ್ಧಲಿಂಗಯ್ಯ, ವಿದ್ವಾಂಸರಾದ ಡಾ. ಎ.ವಿ. ನಾವಡ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಕಾರ್ಮಿಕ ಕಲ್ಯಾಣ ಅಧಿಕಾರಿಗಳಾದ ಶ್ರೀ ಎಸ್. ಆರ್. ಕಲ್ಯಾಣ್ ಕುಮಾರ್, ಕ.ರಾ.ರ.ಸಾ.ಸಂಸ್ಥೆಯ ಕೇಂದ್ರ ಕನ್ನಡ ಕ್ರಿಯಾ ಸಮಿತಿಯ ರಾಜ್ಯಾಧ್ಯಕ್ಷರಾದ ಶ್ರೀ ವ.ಚ. ಚನ್ನೇಗೌಡ ಅವರನ್ನೊಳಗೊಂಡ ಆಯ್ಕೆ ಸಮಿತಿಯು 2016ನೇ ಸಾಲಿನ ಪ್ರಶಸ್ತಿಗಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದೆ.

ಪ್ರಶಸ್ತಿಯು ಏಳು ಲಕ್ಷದ ಒಂದು ರೂ. ನಗದು, ಪ್ರಶಸ್ತಿ ಫಲಕ, ಶಾಲು ಹಾಗೂ ಫಲತಾಂಬೂಲವನ್ನು ಒಳಗೊಂಡಿದೆ

Tag: Chidanandamurthy, Nrupatunga Prashasti

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)