ಡಾ. ರಾಜಶೇಖರ ಹತಗುಂದಿ

ಗೌರವ ಕಾರ್ಯದರ್ಶಿಗಳು

rajasheka_hathagundi

ಮೂಲತಃ ಕಲಬುರ್ಗಿ ಜಿಲ್ಲೆಯವರಾದ ಡಾ. ರಾಜಶೇಖರ ಹತಗುಂದಿ ಕಳೆದ ೩0 ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದಾರೆ. ಸುಮಾರು ಹನ್ನೆರಡಕ್ಕೂ ಹೆಚ್ಚು ಕೃತಿಗಳನ್ನು ರಚಿಸಿರುವ ಇವರು ಕತೆಗಾರರಾಗಿ ಪ್ರಸಿದ್ಧಿ ಪಡೆದಿದ್ದಾರೆ. ಇವರ ‘ಬುದ್ಧನ ನಾಡಿನಲಿ’ ಪ್ರವಾಸ ಕಥನ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಪಠ್ಯಪುಸ್ತಕವಾಗಿ ಅಳವಡಿತಗೊಂಡಿದೆ.

ಡಾ. ರಾಜಶೇಖರ ಹತಗುಂದಿಯವರಿಗೆ ಗುಲಬರ್ಗಾ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಲಭಿಸಿದೆ. ಕರ್ನಾಟಕ ಮಾಧ್ಯಮ ಅಕಾಡೆಮಿಯ ಗೌರವ ಪ್ರಶಸ್ತಿಗೂ ಅವರು ಭಾಜನರಾಗಿದ್ದಾರೆ.  ಶ್ರೀ ಪುಂಡಲೀಕ ಹಾಲಂಬಿಯವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದಾಗ ಕೊನೆಯ ಒಂದೂವರೆ ವರ್ಷ ಅವಧಿಯಲ್ಲಿ ಡಾ. ರಾಜಶೇಖರ ಹತಗುಂದಿಯವರು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಪರಿಷತ್ತಿನ ಅಧ್ಯಕ್ಷರಾದ ಡಾ. ಮನುಬಳಿಗಾರ್ ಅವರು ಡಾ. ರಾಜಶೇಖರ ಹತಗುಂದಿಯವರನ್ನು ಗೌರವ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿದ್ದಾರೆ.

Tag: Rajashekhara Hatagundhi, Karyadarshi, Karyakari Samithi, Secretary

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)