‘ಕವಿರಾಜ ಮಾರ್ಗ’ದಲ್ಲಿ ಕನ್ನಡ ನಾಡಿನ ಬಣ್ಣನೆ

ಶ್ರೀವಿಜಯ (ಕ್ರಿ.ಶ. 877)

kannadakasturi

ಕಾವೇರಿಯಿಂದಮಾ ಗೋ
ದಾವರಿವರಮಿರ್ಪ ನಾಡದಾ ಕನ್ನಡದೊಳ್
ಭಾವಿಸಿದ ಜನಪದಂ ವಸು
ಧಾವಳಯ ವಿಲೀನ ವಿಶದ ವಿಷಯ ವಿಶೇಷಂ

ಪದನರಿದು ನುಡಿಯಲುಂ ನುಡಿ
ದುವನರಿದಾರಯಲುಮಾರ್ಪರಾ ನಾಡವರ್ಗಳ್
ಚದುರರ್ ನಿಜದಿಂ ಕುರಿತೋ
ದದೆಯುಂ ಕಾವ್ಯ ಪ್ರಯೋಗ ಪರಿಣತ ಮತಿಗಳ್

ಕಸವರಮೆಂಬುದು ನೆರೆ ಸೈ
ರಿಸಲಾರ್ಪೊಡೆ ಪರ ವಿಚಾರಮುಂ ಧರ್ಮಮುಮಂ
ಕಸವೇಂ ಕಸವರಮೇನು
ಬ್ಬಸಮಂ ಬಸಮಲ್ಲದಿರ್ದು ಮಾಡುವರೆಲ್ಲಂ

ಶ್ರೀವಿಜಯ (ಕ್ರಿ.ಶ. 877)

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)