ಜಿ.ಎಸ್. ಶಿವರುದ್ರಪ್ಪ

ಕನ್ನಡದ ರಾಷ್ಟ್ರಕವಿಗಳಲ್ಲಿ ಒಬ್ಬರಾಗಿ ವಿಮರ್ಶಕರು ಕವಿಗಳೆಂದು ಪ್ರಸಿದ್ಧರಾದ ಡಾ.ಜಿ.ಎಸ್. ಶಿವರುದ್ರಪ್ಪನವರು ಗುಗ್ಗುರಿ ಶಾಂತವೀರಪ್ಪ ಮತ್ತು ವೀರಮ್ಮನವರ ಪುತ್ರರಾಗಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ೭-೨-೧೯೨೬ರಲ್ಲಿ ಜನಿಸಿದರು. ಶಾಲಾ ಉಪಾಧ್ಯಾಯರ ಮಗನಾದ ಜಿ.ಎಸ್.ಎಸ್(ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ) ಅವರು ಎಸ್.ಎಸ್.ಎಲ್.ಸಿ ಮುಗಿಯುತ್ತಿದ್ದಂತೆಯೇ ಬಡತನದಿಂದಾಗಿ ಸರಕಾರಿ ನೌಕರಿ ಹಿಡಿದು ದುಡಿಯಲಾರಂಭಿಸಿದರು. ಗುಬ್ಬಿ ತಾಲ್ಲೂಕು ಕಚೇರಿಯಲ್ಲಿ […]

ಕೆ.ವಿ. ಪುಟ್ಟಪ್ಪ

ಕನ್ನಡದ ಮಹಾಕವಿ ಕುವೆಂಪು (ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ) ವೆಂಕಟಪ್ಪಗೌಡ- ಸೀತಮ್ಮ ದಂಪತಿಗಳಿಗೆ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿಯಲ್ಲಿ ೨೯-೧೨-೧೯0೪ರಲ್ಲಿ ಜನಿಸಿದರು. ೧೯೧೬ರಲ್ಲಿ ಮನೆಯಲ್ಲೇ ಖಾಸಗಿ ಮೇಷ್ಟರ ಮೂಲಕ ಪ್ರಾರಂಭಿಕ ವಿದ್ಯಾಭ್ಯಾಸದ ನಂತರ ತೀರ್ಥಹಳ್ಳಿಯಲ್ಲಿ ವಿದ್ಯಾಭ್ಯಾಸ ಮುಗಿಸಿ ಮೈಸೂರಿನಲ್ಲಿ ವೆಸ್ಲಿಯನ್ ಮಿಷನ್ ಹೈಸ್ಕೂಲ್, ಮಹಾರಾಜ ಕಾಲೇಜುಗಳಲ್ಲಿ ಓದಿ ೧೯೨೯ರಲ್ಲಿ ಎಂ.ಎ. ಪದವಿ […]

ಎಂ. ಗೋವಿಂದ ಪೈ

ಕನ್ನಡದ ಪ್ರಥಮ ರಾಷ್ಟ್ರಕವಿ ಎಂಬ ಪ್ರಶಸ್ತಿಗೆ ಪಾತ್ರರಾದವರು ಎಂ. ಗೋವಿಂದ ಪೈ. ಹಳಗನ್ನಡ ವಿದ್ವಾಂಸರೂ ಕವಿಗಳೂ ಆದ ಇವರು ಸಾಹುಕಾರ ತಿಮ್ಮಪ್ಪ – ದೇವಕಿಯಮ್ಮ ದಂಪತಿಗಳ ಪುತ್ರರಾಗಿ ೨೩-೩-೧೮೮೩ರಲ್ಲಿ ಮಂಜೇಶ್ವರದಲ್ಲಿ ಜನಿಸಿದರು. ಮಂಗಳೂರಿನಲ್ಲಿ ಶಾಲಾ ವಿದ್ಯಾಭ್ಯಾಸ ಮಾಡಿ ಮದರಾಸ್ ವಿಶ್ವವಿದ್ಯಾಲಯದಲ್ಲಿ ಮಾಡುತ್ತಿದ್ದ ಬಿ.ಎ. ವ್ಯಾಸಂಗವನ್ನು ತಂದೆಯ ನಿಧನದ ದೆಸೆಯಿಂದ […]