ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯತ್ವ ಪಡೆದುಕೊಂಡ ರಾಜ್ಯ ಮಾನ್ಯ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ
ಕರ್ನಾಟಕ ಮಾನ್ಯ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ಎಸ್. ಪಾಟೀಲರು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯತ್ವನ್ನು ಪಡೆದುಕೊಂಡರು.
ಬೆಂಗಳೂರು: *ಕರ್ನಾಟಕ ರಾಜ್ಯದ ಮಾನ್ಯ ಲೋಕಾಯುಕ್ತರಾದ ನ್ಯಾಯಮೂರ್ತಿ ಶ್ರೀ ಬಿ,ಎಸ್. ಪಾಟೀಲ್* ಅವರು ಕನ್ನಡಿಗರ ಹೆಮ್ಮೆಯ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯತ್ವನ್ನು ಪಡೆದುಕೊಂಡಿದ್ದಾರೆ.
ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಹಾಗೂ ಕನ್ನಡ-ಕನ್ನಡಿಗ-ಕರ್ನಾಟಕದ ಹಿನ್ನೆಲೆಯಲ್ಲಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ರೂಪಿಸುವ ಉದ್ದೇಶದಿಂದ ʻ*ಮನೆ ಮನೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು*ʼ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ *ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ* ಅವರು ರಾಜ್ಯಾದ್ಯಂತ ಗಣ್ಯರಿಂದ ಜನಸಾಮಾನ್ಯರವರೆಗೆ, ವಿವಿಧ ಕ್ಷೇತ್ರಗಳಲ್ಲಿ ಸಾಧನಗೈದ ಮಹನೀಯರುಗಳ ಮನೆಗೆ, ಕಚೇರಿಗೆ ಭೇಟಿ ನೀಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು *ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ* ಅವರು ರಾಜ್ಯ ಲೋಕಾಯುಕ್ತರ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ *ಕರ್ನಾಟಕ ರಾಜ್ಯದ ಮಾನ್ಯ ಲೋಕಾಯುಕ್ತರಾದ ನ್ಯಾ. ಬಿ.ಎಸ್. ಪಾಟೀಲ* ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯತ್ವವನ್ನು ಪಡೆದುಕೊಂಡಿದ್ದಾರೆ.
ಸದಸ್ಯತ್ವ ಪಡೆದು ಮಾತನಾಡಿದ *ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲರು*, ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರಿ ಅಸ್ಮಿತೆಯ ಪ್ರತೀಕವಾಗಿದೆ. ಕನ್ನಡಿಗರ ಹೆಮ್ಮೆಯ ಸಂಸ್ಥೆಯ ಚುಕ್ಕಾಣಿಯನ್ನು ನಾಡೋಜ ಡಾ. ಮಹೇಶ ಜೋಶಿ ವಹಿಸಿಕೊಂಡಿದ್ದಾರೆ. ದೂರದರ್ಶನವನ್ನು ಸಮೀಪದರ್ಶನವನ್ನಾಗಿ ಮಾಡುವಲ್ಲಿ ಕ್ರಿಯಾಶೀಲರಾಗಿ ಕೆಲಸ ಮಾಡಿದ್ದಾರೆ. ಈಗ ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿಸುತ್ತಾರೆ ಎಂಬ ನಂಬಿಕೆ ಇದೆ ಎಂದರು.
ಕರ್ನಾಟಕ ಲೋಕಾಯುಕ್ತಯದಲ್ಲಿರುವ ಎಲ್ಲ ಸಿಬ್ಬಂದಿಗಳು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಪಡೆದುಕೊಳ್ಳಬೇಕು ಎನ್ನವ *ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ* ಅವರ ಆಶಯಕ್ಕೆ ಮಾನ್ಯ ಲೋಕಾಯುಕ್ತರು ಸಕಾರಾತ್ಮಕವಾಗಿ ಸಮ್ಮತಿಸಿದರು. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೋಶ್ಯಾಧ್ಯಕ್ಷರಾದ *ಬಿ.ಎಂ. ಪಟೇಲ್ಪಾಂಡು* ಉಪಸ್ಥಿತರಿದ್ದರು.
Press Note_-ಲೋಕಾಯುಕ್ತರ ಸದಸ್ಯತ್ವ- 20.06.2022
ಪ್ರತಿಕ್ರಿಯೆ