ಹಿರಿಯ ಸಾಹಿತಿ, ಚಿಂತಕ, ಪತ್ರಕರ್ತ ಉದಯ ಧರ್ಮಸ್ಥಳ ಅವರಿಗೆ ಸಂತಾಪ ಸೂಚಿಸಿದ ನಾಡೋಜ ಡಾ. ಮಹೇಶ ಜೋಶಿ

ಹಿರಿಯ ಸಾಹಿತಿ, ಚಿಂತಕ, ಪತ್ರಕರ್ತ ಉದಯ ಧರ್ಮಸ್ಥಳ ಅವರಿಗೆ ಸಂತಾಪ ಸೂಚಿಸಿದ ನಾಡೋಜ ಡಾ. ಮಹೇಶ ಜೋಶಿ

ಬೆಂಗಳೂರು: ಹಿರಿಯ ಸಾಹಿತಿ, ಚಿಂತಕ, ಪತ್ರಕರ್ತ, ಪ್ರಕಾಶಕ ಶ್ರೀ ಉದಯ ಧರ್ಮಸ್ಥಳ ಅವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಕಂಬನಿ ಮಿಡಿದಿದ್ದಾರೆ.

ಆಧ್ಯಾತ್ಮಿಕ ಚಿಂತಕರು ಹಾಗೂ ವಾಗ್ಮಿಗಳು ಆಗಿದ್ದ ಶ್ರೀ ಉದಯ ಧರ್ಮಸ್ಥಳ ಅವರು ʻಸನಾತನ ಸಾರಥಿʼ ಪತ್ರಿಕೆಯನ್ನು ಆರಂಭಿಸಿ, ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವರ ಕನ್ನಡ ಪರ ಚಿಂತನೆ ನಿಲುವು ಆದರ್ಶಯುತವಾಗಿತ್ತು. ಕನ್ನಡ ಸಾಹಿತ್ಯ ಪರಿಷತ್ತಿನ ಜೊತೆಯಲ್ಲಿ ನಿಕಟ ಸಂಪರ್ಕವನ್ನು ಹೊಂದಿದ್ದ ಅವರು ಕನ್ನಡ ಉಳಿಸಿ ಬೆಳೆಸುವಲ್ಲಿ ಸದಾ ಕ್ರಿಯಾಶೀಲರಾಗಿದ್ದರು.

ವೈಯಕ್ತಿಕವಾಗಿ ನನ್ನೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದ ಶ್ರೀ ಉದಯ ಧರ್ಮಸ್ಥಳ ಅವರು ನಾನು ದೂರದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಅನೇಕ ಅರ್ಥಪೂರ್ಣ, ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು ಎಂದು ನಾಡೋಜ ಡಾ. ಮಹೇಶ ಜೋಶಿ ನೆನಪು ಮಾಡಿಕೊಂಡಿದ್ದಾರೆ.

ಶ್ರೀ ಉದಯ ಧರ್ಮಸ್ಥಳ ಅವರ ಆತ್ಮಕ್ಕೆ ಆ ಭಗವಂತ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬಕ್ಕೆ ಉದಯರ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಸಂತಾಪ ಸೂಚಿಸಿದ್ದಾರೆ.

ಶ್ರೀನಾಥ್‌ ಜೆ.
ಮಾಧ್ಯಮ ಸಲಹೆಗಾರರು
ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು
KASAPA20-08-2022.

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)