೨೦೨೪-೨೫ನೆಯ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನ

೨೦೨೪-೨೫ನೆಯ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನ

ಅಪ್ಲಿಕೇಶನ್ ೨೦೨೪-೨೦೨೫

ಪರೀಕ್ಷೆಗಳ ನಿಯಮಾವಳಿ

ಬೆಂಗಳೂರು: ಜನ ಸಾಮಾನ್ಯರಲ್ಲಿ ಅದರಲ್ಲಿಯೂ ವಿಶೇಷವಾಗಿ ಕನ್ನಡ ಯುವಜನತೆಯಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಕುರಿತು ಆಸಕ್ತಿ ಮೂಡಿಸಲು ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿದ್ದ ಬಿ.ಎಂ.ಶ್ರೀಯವರು ರೂಪಿಸಿದ ಮುಖ್ಯ ಯೋಜನೆ ಕನ್ನಡ ಸಾಹಿತ್ಯ ಪರೀಕ್ಷೆಗಳು. 1940ರ ಜೂನ್ ತಿಂಗಳಿನಿಂದ ‘ಕನ್ನಡ ಅಣುಗ’ ‘ಕನ್ನಡ ಕಾವ’ ‘ಕನ್ನಡ ಜಾಣ’ ಪರೀಕ್ಷೆಗಳು ಆರಂಭವಾದವು. 1948ರಲ್ಲಿ ‘ಅಣುಗ’ವನ್ನು ಕೈ ಬಿಡಲಾಯಿತು. 1966ರಲ್ಲಿ ‘ಕನ್ನಡ ರತ್ನ’ ಪರೀಕ್ಷೆ ಆರಂಭವಾಗಿದ್ದು 1992ರಲ್ಲಿ ‘ಕನ್ನಡ ಪ್ರವೇಶ’ ಆರಂಭವಾಯಿತು. ಈ ಎಲ್ಲಾ ಪರೀಕ್ಷೆಗಳು ಲಕ್ಷಾಂತರ ಕನ್ನಡಿಗರಲ್ಲಿ ಭಾಷೆ ಮತ್ತು ಸಾಹಿತ್ಯದ ಕುರಿತು ಅರಿವು ಮೂಡಿಸುವಲ್ಲಿ ಯಶಸ್ವಿಯಾಗಿದ್ದು ನಿರಂತರವಾಗಿ ನಡೆದು ಕೊಂಡು ಬರುತ್ತಿವೆ.

ಕನ್ನಡ ಸಾಹಿತ್ಯ ಪರಿಷತ್ತು ೨೦೨೪-೨೫ನೆಯ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ೨೦೨೪ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಮೇಲ್ಕಂಡ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಲು ೨೦೨೪ರ ಆಗಸ್ಟ್ ೩೧ ಕೊನೆಯ ದಿನಾಂಕವಾಗಿದ್ದು, ೨೦೨೪ರ ಸೆಪ್ಟೆಂಬರ್ ೧೫ರವರೆಗೆ ದಂಡದ ಶುಲ್ಕ ರೂ. ೫೦-೦೦ ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು.

ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ರೂ. ೨೫-೦೦ಗಳ ಶುಲ್ಕ ಪಾವತಿಸಿ, ಕನ್ನಡ ಸಾಹಿತ್ಯ ಪರಿಷತ್ತಿನ ಪುಸ್ತಕ ಮಾರಾಟ ಮಳಿಗೆಯಲ್ಲಿ (ಬೆಂಗಳೂರು) ದಿನಾಂಕ ೦೧-೦೭-೨೦೨೪ ರಿಂದ ಪಡೆಯಬಹುದು. ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಈ ಹೆಸರಿಗೆ ಮೂವತ್ತು ರೂಪಾಯಿಗಳನ್ನು ಮನಿಯಾರ್ಡರ್ ಮಾಡಿದರೆ ಅರ್ಜಿಯನ್ನು ತಾವು ನೀಡಿರುವ ವಿಳಾಸಕ್ಕೆ ಅಂಚೆಯ ಮೂಲಕ ಕಳುಹಿಸಲಾಗುವುದು.

ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in ಮೂಲಕ ಸಹ ಪಡೆದು ಕೊಳ್ಳಬಹುದು. ಇವರು ನಿಗದಿತ ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ.೨೫/-ಗಳನ್ನು ಪ್ರತ್ಯೇಕವಾಗಿ ಪಾವತಿಸುವುದು.

ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು – ೫೬೦೦೧೮, ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಂತರ್ಜಾಲ ತಾಣಗಳಾದ

ಫೇಸ್ ಬುಕ್ : https://www.facebook.com/kasapaofficial

ಫೇಸ್ ಬುಕ್ : https://www.facebook.com/KannadaSahityaParishattu

ಟ್ವಿಟರ್ : https://twitter.com/kannadaparishat

ಕೂ ಆಪ್ : https://www.kooapp.com/profile/kasapa

ಇನ್ ಸ್ಟಾಗ್ರಾಮ್ : https://www.instagram.com/kannadasahityaparishattu

ವೆಬ್ ಸೈಟ್ : https://kannadasahithyaparishattu.in

ದೂರವಾಣಿ ಸಂಖ್ಯೆ : ೦೮೦-೨೬೬೧೨೯೯೧, ೨೨೪೨೩೮೬೭, ೨೬೬೨೩೫೮

ಎನ್.ಎಸ್.ಶ್ರೀಧರ ಮೂರ್ತಿ
ಸಂಚಾಲಕರು, ಪ್ರಕಟಣಾ ವಿಭಾಗ
ಕನ್ನಡ ಸಾಹಿತ್ಯ ಪರಿಷತ್ತು

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)