ಕನ್ನಡ ಸಾಹಿತ್ಯ ಪರಿಷತ್ತಿನ ಅಲ್ಪಸಂಖ್ಯಾತರ ಪ್ರತಿನಿಧಿಯಾಗಿ ಸರ್ದಾರ್ ಬಲ್ಜಿತ್ ಸಿಂಗ್ ನೇಮಕ

ಕನ್ನಡ ಸಾಹಿತ್ಯ ಪರಿಷತ್ತಿನ ಅಲ್ಪಸಂಖ್ಯಾತರ ಪ್ರತಿನಿಧಿಯಾಗಿ ಸರ್ದಾರ್ ಬಲ್ಜಿತ್ ಸಿಂಗ್ ನೇಮಕ

ಬೆಂಗಳೂರು: ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ, ಪರಂಪರೆ ಮತ್ತು ಜಾನಪದಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆಗಾಗಿ ಶ್ರಮಿಸುತ್ತಿರುವ ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ 107 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಐತಿಹಾಸಿಕ ನಿರ್ಣಯವನ್ನು ಮಾಡಿದೆ. *ಪಂಜಾಬ ಮೂಲದ ಸಿಖ್ ಧರ್ಮದ ಶ್ರೀ ಸರ್ದಾರ್ ಬಲ್ಜಿತ್ ಸಿಂಗ್* ಅವರನ್ನು ʻ*ಸಿಖ್ ಸಮುದಾಯದ ಅಲ್ಪಸಂಖ್ಯಾತರ ಪ್ರತಿನಿಧಿ*ʼಯಾಗಿ ನೇಮಕ ಮಾಡಲಾಗಿದೆ.

*ಶ್ರೀ ಸರ್ದಾರ್ ಬಲ್ಜಿತ್ ಸಿಂಗ್* ಅವರು ಮೂಲತಃ ಪಂಜಾಬನವರಾಗಿದ್ದರು ಇವರು ಹುಟ್ಟಿದ್ದು ಬೆಂಗಳೂರಿನಲ್ಲಿ. ಹಾಗಾಗಿ ಕನ್ನಡ ಭಾಷೆಯ ಕುರಿತು ಅಪಾರ ಗೌರವವನ್ನು ಹೊಂದಿದ್ದ ಸರ್ದಾರ್ ಬಲ್ಜಿತ್ ಸಿಂಗ್ ಅವರು ಕನ್ನಡವನ್ನು ಕಲಿತು ನಿರರ್ಗಳವಾಗಿ ಮಾತನಾಡುತ್ತಾರೆ, ಕನ್ನಡದಲ್ಲಿ ಬರೆಯುವುದನ್ನು ರೂಢಿಸಿಕೊಂಡಿದ್ದಾರೆ. ಅದರೊಂದಿಗೆ ಕನ್ನಡಿಗರ ಹೆಮ್ಮೆಯ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವವನ್ನು ಪಡೆದುಕೊಂಡಿದ್ದಾರೆ. ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ‘*ಸಿಖ್ ಸಮುದಾಯದ ಅಲ್ಪಸಂಖ್ಯಾತರ ಪ್ರತಿನಿಧಿ*’ಯಾಗಿ ಕಾರ್ಯನಿರ್ವಹಿಸಲು ಸಂತೋಷದಿಂದ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮಹತ್ವದ ಜವಾಬ್ದಾರಿಯನ್ನು ನೀಡಿದೆ ಎಂದು *ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ* ತಿಳಿಸಿದ್ದಾರೆ.

ಶ್ರೀನಾಥ ಜೆ
ಮಾಧ್ಯಮ ಸಲಹೆಗಾರರು
ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು
KASAPA_ ಕಸಾಪ ಅಲ್ಪಸಂಖ್ಯಾತರ ಘಟಕದ ಪ್ರತಿನಿಧಿ ನೇಮಕ_05-08-2022

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)