ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರ ಹಾಗೂ ಆವರಣದ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭದ ಆಹ್ವಾನ ಪತ್ರಿಕೆ

ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರ ಹಾಗೂ ಆವರಣದ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭದ ಆಹ್ವಾನ ಪತ್ರಿಕೆ – ಮಾಧ್ಯಮ ಆಹ್ವಾನ

ನಿರ್ಮಾಣಗೊಂಡು ೯೦ ವರ್ಷಗಳ ನಂತರ ಕನ್ನಡ ಸಾಹಿತ್ಯ ಪರಿಷತ್ತಿನ ʻಶ್ರೀ ಕೃಷ್ಣರಾಜ ಪರಿಷತ್ತು ಮಂದಿರ’ ಸಂಪೂರ್ಣ ನವೀಕರಣಗೊಂಡಿದೆ. ಆಧುನಿಕ ಕಾಲಘಟ್ಟಕ್ಕೆ ತಕ್ಕಂತೆ ಹವಾನಿಯಂತ್ರಿತ ಸಭಾಂಗಣ, ಸುಸಜ್ಜಿತ ಆಸನ ವ್ಯವಸ್ಥೆ, ಸಮರ್ಪಕ ಧ್ವನಿ, ಬೆಳಕಿನ ವಿನ್ಯಾಸ ಹೀಗೆ ಹೊಸ ಕಾಲಘಟ್ಟಕ್ಕೆ ತಕ್ಕಂತೆ ರೂಪುಗೊಂಡಿದೆ. ಇಂಥಹ ಐತಿಹಾಸಿಕ ಕಟ್ಟಡದ ನವೀನ ರೂಪವನ್ನು ನಾಳೆ ೨೬ ಅಗಸ್ಟ್ ೨೦೨೨ರ ಶುಕ್ರವಾರ ಸಂಜೆ ೫ ಗಂಟೆಗೆ ನಾಡಿನ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿಯವರು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಂದಾಯ ಸಚಿವರಾದ ಶ್ರೀ ಆರ್. ಅಶೋಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ ವಿ ಸುನೀಲ್ ಕುಮಾರ್, ಪ್ರೌಢ ಶಿಕ್ಷಣ ಇಲಾಖೆ ಸಚಿವರಾದ ಶ್ರೀ ಬಿ.ಸಿ. ನಾಗೇಶ್ ಅವರು ಭಾಗವಹಿಸಲಿದ್ದಾರೆ. ವಿಶೇಷ ಅಥಿತಿಗಳಾಗಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ಚಂದ್ರಶೇಖರ ಕಂಬಾರ, ಹಿರಿಯ ಸಾಹಿತಿ ನಾಡೋಜ ಡಾ. ಕಮಲಾ ಹಂಪನಾ, ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಅವರು ಭಾಗವಹಿಸಲಿದ್ದಾರೆ.

ಕನ್ನಡಿಗರ ಹೆಮ್ಮೆಯ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜೇಂದ್ರ ಪರಿಷತ್ತಿನ ಮಂದಿರ ಹಾಗೂ ಆವರಣ ನವೀಕರಣ ಕಟ್ಟಡದ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಕನ್ನಡಾಭಿಮಾನಿಗಳು, ಸಹೃದಯಿ ಕನ್ನಡಿಗರೆಲ್ಲರೂ ಭಾಗವಹಿಸುವಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಆದರದ ಆಮಂತ್ರಣ ನೀಡಿದ್ದಾರೆ.

ಎಲ್ಲರ ಸಮಯಕ್ಕೆ ಗೌರವ ಕೊಟ್ಟು ನಿಗದಿತ ಸಮಯಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ತಮ್ಮ ವರದಿಗಾರರನ್ನು ಹಾಗೂ ಛಾಯಾಚಿತ್ರಗಾರರನ್ನು ದಿನಾಂಕ ೨೬ ಅಗಸ್ಟ್ ೨೦೨೨ರ ಶುಕ್ರವಾರ ಸಂಜೆ ೫ ಗಂಟೆಗೆ ಕಳುಹಿಸಬೇಕಾಗಿ ವಿನಂತಿ.

ಶ್ರೀನಾಥ ಜೆ.
ಮಾಧ್ಯಮ ಸಲಹೆಗಾರರು
ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು

Kasapa-ಮಾಧ್ಯಮ ಆಹ್ವಾನ- 25-08-2022

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)