ಕನ್ನಡ ಸಾಹಿತ್ಯ ಪರಿಷತ್ತು

ಫೆಬ್ರವರಿ 7,8 ಮತ್ತು 9 ರಂದು ಕನ್ನಡ ಸಾಹಿತ್ಯ ಪರಿಷತ್ತಿನಕನ್ನಡ ಪ್ರವೇಶ, ಕಾವ, ಜಾಣ ಪರೀಕ್ಷೆಗಳು

ಬೆಂಗಳೂರು  : ಜನ ಸಾಮಾನ್ಯರಲ್ಲಿ ಅದರಲ್ಲಿಯೂ ವಿಶೇಷವಾಗಿ ಕನ್ನಡ ಯುವಜನತೆಯಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಕುರಿತು ಆಸಕ್ತಿ ಮೂಡಿಸಲು ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿದ್ದ ಬಿ.ಎಂ.ಶ್ರೀಯವರು ರೂಪಿಸಿದ ಮುಖ್ಯ ಯೋಜನೆ ಕನ್ನಡ ಸಾಹಿತ್ಯ ಪರೀಕ್ಷೆಗಳು. 1940ರ ಜೂನ್ ತಿಂಗಳಿನಿಂದ `ಕನ್ನಡ ಅಣುಗ’, ಕನ್ನಡ ಕಾವ, ಕನ್ನಡ ಜಾಣ ಪರೀಕ್ಷೆಗಳು ಆರಂಭವಾದವು. 1948ರಲ್ಲಿ `ಅಣುಗ’ವನ್ನು ಕೈ ಬಿಡಲಾಯಿತು. 1966ರಲ್ಲಿ ‘ಕನ್ನಡ ರತ್ನ’ ಪರೀಕ್ಷೆ ಆರಂಭವಾಗಿದ್ದು, 1992ರಲ್ಲಿ ಕನ್ನಡ ಪ್ರವೇಶ ಆರಂಭವಾಯಿತು. ಈ ಎಲ್ಲಾ ಪರೀಕ್ಷೆಗಳು ಲಕ್ಷಾಂತರ ಕನ್ನಡಿಗರಲ್ಲಿ ಭಾಷೆ ಮತ್ತು ಸಾಹಿತ್ಯದ ಕುರಿತು ಅರಿವು ಮೂಡಿಸುವಲ್ಲಿ ಯಶಸ್ವಿಯಾಗಿದ್ದು, ನಿರಂತರವಾಗಿ ನಡೆದುಕೊಂಡು ಬರುತ್ತಿವೆ.

ಈ ವರ್ಷ  ಕನ್ನಡ ಸಾಹಿತ್ಯ ಪರಿಷತ್ತು ೨೦೨೪-೨೫ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳನ್ನು  ೨೦೨೫ ಫೆಬ್ರವರಿ ೦೭, ೦೮ ಮತ್ತು ೦೯ರಂದು ಒಟ್ಟು ೩ ದಿನಗಳ ಕಾಲ ರಾಜ್ಯದ ೧೮ ಕೇಂದ್ರಗಳಲ್ಲಿ ನಡೆಸಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಅರ್ಹ ಅಭ್ಯರ್ಥಿಗಳಿಗೆ ಮೇಲ್ಕಂಡ ಪರೀಕ್ಷೆಗಳ  ಪ್ರವೇಶ ಪತ್ರಗಳನ್ನು ನೊಂದಾಯಿತ ಅಂಚೆ ಮೂಲಕ ಕಳುಹಿಸಲಾಗಿದೆ. ದಿನಾಂಕ ೦೧-೦೨-೨೦೨೫ರ ನಂತರವೂ ಪ್ರವೇಶ ಪತ್ರ ತಲುಪದಿದ್ದರೆ  ಈ ಬಗ್ಗೆ ಅಭ್ಯರ್ಥಿಗಳು ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-೧೮ ಇಲ್ಲಿ ವಿಚಾರಿಸಬಹುದು. ಸಂಪರ್ಕಿಸಬೇಕಾದ  ದೂರವಾಣಿ ಸಂಖ್ಯೆ ೦೮೦-೨೬೬೧೨೯೯೧, ೨೬೬೨೩೫೮೪, ೨೬೫೨೩೮೬೭
ಅಭ್ಯರ್ಥಿಗಳು  ಪ್ರವೇಶ ಪತ್ರ ಮತ್ತು ಪರೀಕ್ಷಾ ಕೇಂದ್ರಗಳ ವಿಳಾಸವನ್ನು ಅಂತರ್ಜಾಲ ತಾಣ www.kasapa.in  ಮೂಲಕ ಸಹ ಪಡೆದುಕೊಳ್ಳಬಹುದು ಎಂದು ನಾಡೋಜ ಡಾ.ಮಹೇಶ ಜೋಶಿಯವರು ತಿಳಿಸಿದ್ದಾರೆ.

ಎನ್.ಎಸ್.ಶ್ರೀಧರ ಮೂರ್ತಿ(ಸಂಚಾಲಕರು, ಪ್ರಕಟಣಾ ವಿಭಾಗ)

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪ್ರಕಟ ಮಾಡುವುದಿಲ್ಲ.

Scroll to Top