ಕನ್ನಡ ಸಾಹಿತ್ಯ ಪರಿಷತ್ತು ಕರ್ನಾಟಕ ಲೇಖಕಿಯರ ಸಂಘದ ಸಹಯೋಗದೊಂದಿಗೆ ಏರ್ಪಡಿಸುತ್ತಿರುವ ‘ಸಾಧಕರೊಂದಿಗೆ ಸಂವಾದ’ ಸರಣಿಯ ಐದನೆಯ ಕಾರ್ಯಕ್ರಮಕ್ಕೆ ಸಂವಾದಿಸಲು ಆಗಮಿಸಿದ ಸಾಧಕರು ಹಿಂದೊಸ್ಥಾನಿ ಸಂಗೀತ ಮತ್ತು ಕರ್ನಾಟಕ ಶಾಸ್ತ್ರೀಯ ಸಂಗೀತಗಳೆರಡರಲ್ಲೂ ಅಪಾರ ಸಾಧನೆ ಮಾಡಿ ಉಭಯಗಾನ ವಿದುಷಿ ಎಂದೇ ಪ್ರಖ್ಯಾತರಾದ ಡಾ. ಶ್ಯಾಮಲಾ ಜಿ. ಭಾವೆ ಅವರು. ಈ ಕಾರ್ಯಕ್ರಮ ಅಕ್ಟೋಬರ್ ೨೨, ೨೦೧೬ರಂದು ಪರಿಷತ್ತಿನ ಅಧ್ಯಕ್ಷರಾದ ಡಾ. ಮನು ಬಳಿಗಾರ್ ಅವರ ಅಧ್ಯಕ್ಷತೆ ಹಾಗೂ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷರಾದ ಡಾ. ವಸುಂಧರಾ ಭೂಪತಿ ಅವರ ಉಪಸ್ಥಿತಿಯಲ್ಲಿ ನೆರವೇರಿತು.
ಶ್ಯಾಮಲಾ ಜಿ. ಭಾವೆ
ಹಿಂದೂಸ್ಥಾನಿ ಹಾಗೂ ಕರ್ನಾಟಕ ಸಂಗೀತ ಪದ್ಧತಿಗಳೆರಡರಲ್ಲೂ ನಿಷ್ಣಾತರಾಗಿ, ಶಾಸ್ತ್ರೀಯ ಸಂಗೀತದ ಜೊತೆಗೆ ಸುಗಮ ಸಂಗೀತದಲ್ಲಿ ವಿಶೇಷ ಸಾಧನೆಗೈದು, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ, ಸಂಗೀತಕ್ಕಾಗಿ ತಮ್ಮ ಸಂಪೂರ್ಣ ಜೀವನವನ್ನು ಮೀಸಲಾಗಿರಿಸಿರುವ ಉಭಯ ಗಾನ ವಿದುಷಿ ಶ್ರೀಮತಿ ಶ್ಯಾಮಲಾ ಜಿ. ಭಾವೆ ಕರ್ನಾಟಕ ಮಹಿಳಾ ಸಂಗೀತಗಾರರಲ್ಲಿ ಅಗ್ರಗಣ್ಯರು.
ಶ್ಯಾಮಲಾ ಭಾವೆ ಅವರು ಜನಿಸಿದ್ದು ಬೆಂಗಳೂರಿನಲ್ಲಿ 1941ರ ಮಾರ್ಚ್ 14ರಂದು. ಅವರದು ಸಂಗೀತ ಹಾಗೂ ರಂಗಭೂಮಿ ಪರಂಪರೆಯ ಮನೆತನ. ಅವರ ಮುತ್ತಜ್ಜ ವಿಷ್ಣುದಾಸ ಭಾವೆ ಮರಾಠಿ ರಂಗಭೂಮಿಯ ಆದ್ಯ ಪ್ರವರ್ತಕರು. ತಂದೆ ಗೋವಿಂದ ವಿಠಲ ಭಾವೆ ಗಾಯಕರಷ್ಟೇ ಅಲ್ಲದೆ ಹದಿನಾಲ್ಕು ವಾದ್ಯ ನುಡಿಸಬಲ್ಲ ಪ್ರತಿಭಾನ್ವಿತರು. ಸಂಗೀತೋದ್ಧಾರಕ ಪಂ. ವಿಷ್ಣು ದಿಗಂಬರ ಪಲುಸ್ಕರ ಅವರ ಶಿಷ್ಯಂದಿರು. ತಾಯಿ ಶ್ರೀಮತಿ ಲಕ್ಷ್ಮೀ ಭಾವೆ ಜೇನು ಕಂಠದ ಗಾಯಕಿ. ಇಂತಹ ಸಂಗೀತ ವಾತಾವರಣದ ಮನೆತನದಲ್ಲಿ ಜನಿಸಿದ ಶ್ಯಾಮಲಾ ಅವರಿಗೆ 3ನೇ ವಯಸ್ಸಿನಲ್ಲಿ ಸಂಗೀತ ಕಲಿಕೆಗೆ ನಾಂದಿಯಾಯಿತು. 6ನೇ ವಯಸ್ಸಿನಲ್ಲಿ ಸಂಗೀತ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಪಡೆದ ಹೆಗ್ಗಳಿಕೆ ಸಂದಿತು. 12ನೇ ವಯಸ್ಸಿಗೆ ಸಾರ್ವಜನಿಕ ಸಂಗೀತ ಕಛೇರಿ ನೀಡಿದರು. ತಂದೆ-ತಾಯಿಯರಿಂದ ಹಿಂದೂಸ್ಥಾನಿ ಸಂಗೀತವನ್ನು, ಬಿ. ದೊರೆಸ್ವಾಮಿ ಹಾಗೂ ಎ. ಸುಬ್ಬರಾಯ ಅವರಲ್ಲಿ ಕರ್ನಟಕ ಸಂಗೀತದ ತಾಲೀಮು ಪಡೆದು ಉಭಯಗಾನ ವಿದುಷಿ ಎಂಬ ಖ್ಯಾತಿಗಳಿಸಿದರು.
1930ರಲ್ಲಿ ಬೆಂಗಳೂರಿನಲ್ಲಿ ಶ್ಯಾಮಲಾ ಅವರ ತಂದೆ ಗೋವಿಂದ ವಿಠಲ ಭಾವೆಯವರು ಪ್ರಪ್ರಥಮ ಹಿಂದುಸ್ಥಾನಿ ಸಂಗೀತ ಶಾಲೆ ಸರಸ್ವತಿ ಸಂಗೀತ ವಿದ್ಯಾಲಯವನ್ನು ಸ್ಥಾಪಿಸಿದರು. ಅದನ್ನ ಸಮರ್ಥವಾಗಿ ಮುನ್ನಡೆಸುತ್ತ, ಸಹಸ್ರಾರು ಆಸಕ್ತರಿಗೆ ಸಂಗೀತ ಶಿಕ್ಷಣ ನೀಡುತ್ತಿರುವ ಶ್ಯಾಮಲಾ ಅವರು ವಿವಿಧ ದೇಶಗಳಲ್ಲಿ ಸಂಗೀತ ಕಛೇರಿ ನೀಡಿ ಭಾರತೀಯ ಸಂಗೀತಕ್ಕೆ ರಾಷ್ಟ್ರೀಯ ಖ್ಯಾತಿ ತಂದುಕೊಟ್ಟಿದ್ದಾರೆ. ಪಂ. ಜಸರಾಜ್ ಅವರ ಮಾರ್ಗದರ್ಶನದಲ್ಲಿ ಸಂಗೀತ ತಾಲೀಮು ಪಡೆದ ಅವರು ಅನೇಕ ಚಲನಚಿತ್ರ, ಸಾಕ್ಷಚಿತ್ರ, ಗ್ರಾಮಫೋನ್ ಹಾಗೂ ಕ್ಯಾಸೆಟ್‌ಗಳಲ್ಲಿ ಧ್ವನಿ ನೀಡಿ, ಸಂಗೀತ ನಿರ್ದೇಶನ ಮಾಡಿದ್ದಾರೆ. ಒಂಭತ್ತು ಭಾಷೆಗಳ ಸುಮಾರು 1500ಕ್ಕೂ ಹೆಚ್ಚಿನ ಗೀತೆಗಳಿಗೆ ರಾಗ ಸಂಯೋಜಿಸಿದ್ದಾರೆ.
ಶ್ಯಾಮಲಾ ಜಿ. ಭಾವೆ
ಹಿಂದೂಸ್ಥಾನಿ ಹಾಗೂ ಕರ್ನಾಟಕ ಸಂಗೀತ ಪದ್ಧತಿಗಳೆರಡರಲ್ಲೂ ನಿಷ್ಣಾತರಾಗಿ, ಶಾಸ್ತ್ರೀಯ ಸಂಗೀತದ ಜೊತೆಗೆ ಸುಗಮ ಸಂಗೀತದಲ್ಲಿ ವಿಶೇಷ ಸಾಧನೆಗೈದು, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ, ಸಂಗೀತಕ್ಕಾಗಿ ತಮ್ಮ ಸಂಪೂರ್ಣ ಜೀವನವನ್ನು ಮೀಸಲಾಗಿರಿಸಿರುವ ಉಭಯ ಗಾನ ವಿದುಷಿ ಶ್ರೀಮತಿ ಶ್ಯಾಮಲಾ ಜಿ. ಭಾವೆ ಕರ್ನಾಟಕ ಮಹಿಳಾ ಸಂಗೀತಗಾರರಲ್ಲಿ ಅಗ್ರಗಣ್ಯರು.
ಶ್ಯಾಮಲಾ ಭಾವೆ ಅವರು ಜನಿಸಿದ್ದು ಬೆಂಗಳೂರಿನಲ್ಲಿ 1941ರ ಮಾರ್ಚ್ 14ರಂದು. ಅವರದು ಸಂಗೀತ ಹಾಗೂ ರಂಗಭೂಮಿ ಪರಂಪರೆಯ ಮನೆತನ. ಅವರ ಮುತ್ತಜ್ಜ ವಿಷ್ಣುದಾಸ ಭಾವೆ ಮರಾಠಿ ರಂಗಭೂಮಿಯ ಆದ್ಯ ಪ್ರವರ್ತಕರು. ತಂದೆ ಗೋವಿಂದ ವಿಠಲ ಭಾವೆ ಗಾಯಕರಷ್ಟೇ ಅಲ್ಲದೆ ಹದಿನಾಲ್ಕು ವಾದ್ಯ ನುಡಿಸಬಲ್ಲ ಪ್ರತಿಭಾನ್ವಿತರು. ಸಂಗೀತೋದ್ಧಾರಕ ಪಂ. ವಿಷ್ಣು ದಿಗಂಬರ ಪಲುಸ್ಕರ ಅವರ ಶಿಷ್ಯಂದಿರು. ತಾಯಿ ಶ್ರೀಮತಿ ಲಕ್ಷ್ಮೀ ಭಾವೆ ಜೇನು ಕಂಠದ ಗಾಯಕಿ. ಇಂತಹ ಸಂಗೀತ ವಾತಾವರಣದ ಮನೆತನದಲ್ಲಿ ಜನಿಸಿದ ಶ್ಯಾಮಲಾ ಅವರಿಗೆ ೩ನೇ ವಯಸ್ಸಿನಲ್ಲಿ ಸಂಗೀತ ಕಲಿಕೆಗೆ ನಾಂದಿಯಾಯಿತು. ೬ನೇ ವಯಸ್ಸಿನಲ್ಲಿ ಸಂಗೀತ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಪಡೆದ ಹೆಗ್ಗಳಿಕೆ ಸಂದಿತು. ೧೨ನೇ ವಯಸ್ಸಿಗೆ ಸಾರ್ವಜನಿಕ ಸಂಗೀತ ಕಛೇರಿ ನೀಡಿದರು. ತಂದೆ-ತಾಯಿಯರಿಂದ ಹಿಂದೂಸ್ಥಾನಿ ಸಂಗೀತವನ್ನು, ಬಿ. ದೊರೆಸ್ವಾಮಿ ಹಾಗೂ ಎ. ಸುಬ್ಬರಾಯ ಅವರಲ್ಲಿ ಕರ್ನಟಕ ಸಂಗೀತದ ತಾಲೀಮು ಪಡೆದು ಉಭಯಗಾನ ವಿದುಷಿ ಎಂಬ ಖ್ಯಾತಿಗಳಿಸಿದರು. ಪುಟ್ಟ ವಯಸ್ಸಿನಲ್ಲೇ ಹಿಂದೊಸ್ಥಾನಿ ಮತ್ತು ಕರ್ನಾಟಕ ಸಂಗೀತಗಳೆರಡಲ್ಲೂ ಹಾಡಿದ ಶ್ಯಾಮಲಾ ಅವರ ಗಾಯನವನ್ನು ಕೇಳಿದ ಅವರ ತಂದೆಯವರ ಮಿತ್ರರಾಗಿದ್ದ ಸರ್ ಎಂ. ವಿಶ್ವೇಶ್ವರಯ್ಯನವರು ಉಭಯಗಾನ ವಿದುಷಿ ಎಂದು ಸಂಬೋಧಿಸಿದ ಹೆಸರು ಮುಂದೆ ಅವರೊಂದಿಗೆ ಶಾಶ್ವತವಾಗಿ ಉಳಿದಿದೆ.
೧೯೩೦ರಲ್ಲಿ ಬೆಂಗಳೂರಿನಲ್ಲಿ ಶ್ಯಾಮಲಾ ಅವರ ತಂದೆ ಗೋವಿಂದ ವಿಠಲ ಭಾವೆಯವರು ಪ್ರಪ್ರಥಮ ಹಿಂದುಸ್ಥಾನಿ ಸಂಗೀತ ಶಾಲೆ ಸರಸ್ವತಿ ಸಂಗೀತ ವಿದ್ಯಾಲಯವನ್ನು ಸ್ಥಾಪಿಸಿದರು. ಅದನ್ನ ಸಮರ್ಥವಾಗಿ ಮುನ್ನಡೆಸುತ್ತ, ಸಹಸ್ರಾರು ಆಸಕ್ತರಿಗೆ ಸಂಗೀತ ಶಿಕ್ಷಣ ನೀಡುತ್ತಿರುವ ಶ್ಯಾಮಲಾ ಅವರು ವಿವಿಧ ದೇಶಗಳಲ್ಲಿ ಸಂಗೀತ ಕಛೇರಿ ನೀಡಿ ಭಾರತೀಯ ಸಂಗೀತಕ್ಕೆ ರಾಷ್ಟ್ರೀಯ ಖ್ಯಾತಿ ತಂದುಕೊಟ್ಟಿದ್ದಾರೆ. ಪಂ. ಜಸರಾಜ್ ಅವರ ಮಾರ್ಗದರ್ಶನದಲ್ಲಿ ಸಂಗೀತ ತಾಲೀಮು ಪಡೆದ ಅವರು ಅನೇಕ ಚಲನಚಿತ್ರ, ಸಾಕ್ಷಚಿತ್ರ, ಗ್ರಾಮಫೋನ್ ಹಾಗೂ ಕ್ಯಾಸೆಟ್‌ಗಳಲ್ಲಿ ಧ್ವನಿ ನೀಡಿ, ಸಂಗೀತ ನಿರ್ದೇಶನ ಮಾಡಿದ್ದಾರೆ. ಒಂಭತ್ತು ಭಾಷೆಗಳ ಸುಮಾರು ೧೫೦೦ಕ್ಕೂ ಹೆಚ್ಚಿನ ಗೀತೆಗಳಿಗೆ ರಾಗ ಸಂಯೋಜಿಸಿದ್ದಾರೆ.
ಶ್ಯಾಮಲಾ ಭಾವೆ ಅವರು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಸದಸ್ಯರಾಗಿ, ಅಕಾಡೆಮಿಯ ಅಧ್ಯಕ್ಷರಾಗಿ ಸಂಗೀತ ಕ್ಷೇತ್ರದ ಸೇವೆ ಮಾಡಿದ್ದಾರೆ. ೧೯೯೭ರಲ್ಲಿ ಅವರ ಶಿಷ್ಯರು, ಅಭಿಮಾನಿಗಳು ‘ಸ್ವರ ಸಾಧನಾ’ ಎಂಬ ಅಭಿನಂದನ ಗ್ರಂಥ ಅರ್ಪಿಸಿದ್ದಾರೆ. ಅವರಿಗೆ, ಉಭಯಗಾನ ವಿಶಾರದೆ, ಉಭಯ ಗಾನ ವಿದುಷಿ, ಕರ್ನಾಟಕ ರಾಜ್ಯೋತ್ಸವ, ಗಾನ ಮಾಧುರಿ, ಸುರಮಣಿ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಕರ್ನಾಟಕ ಕಲಾ ತಿಲಕ, ಅಮೇರಿಕಾದ ಹ್ಯೂಸ್ಟನ್ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ (೨೦೦೭), ಭಾರತ ಗೌರವ್, ‘ವರ್ಷದ ಮಹಿಳೆ’ (೧೯೯೭), ಗಾನ ಕೋಕಿಲ, ಕೃಷ್ಣಗಾನ ಮಾಧುರಿ ಮುಂತಾದ ಅನೇಕ ಪ್ರಶಸ್ತಿ ಪುರಸ್ಕಾರಗಳು ಸಂದಿವೆ.
Tag: Shyamala G Bhave
ಪ್ರತಿಕ್ರಿಯೆ