ಸ್ವಾತಂತ್ರ ದಿನಾಚರಣೆಯ ಪ್ರಯುಕ್ತ ಆಗಸ್ಟ್ ತಿಂಗಳಿಡೀ ಕನ್ನಡ ಸಾಹಿತ್ಯ ಪರಿಷತ್ತಿನ ಪುಸ್ತಕಗಳ ರಿಯಾಯತಿ ಮಾರಾಟ

ಸ್ವಾತಂತ್ರ ದಿನಾಚರಣೆಯ ಪ್ರಯುಕ್ತ ಆಗಸ್ಟ್ ತಿಂಗಳಿಡೀ ಕನ್ನಡ ಸಾಹಿತ್ಯ ಪರಿಷತ್ತಿನ ಪುಸ್ತಕಗಳ ರಿಯಾಯತಿ ಮಾರಾಟ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಹಾಗು ಜನ ಸಾಮಾನ್ಯರಿಗೆ ಕನ್ನಡ ಸಾಹಿತ್ಯ ಪರಿಷತ್ತನ್ನು ತಲುಪಿಸಲು ನಾಡೋಜ ಡಾ.ಮಹೇಶ ಜೋಶಿಯವರು ಅಧ್ಯಕ್ಷರಾದ ನಂತರ ಅನೇಕ ವಿಶಿಷ್ಟ ಯೋಜನೆಗಳನ್ನು ಹಮ್ಮಿ ಕೊಳ್ಳುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಇದವರೆಗೂ ಎರಡು ಸಾವಿರಕ್ಕೂ ಹೆಚ್ಚು ಮಹತ್ವದ ಪ್ರಕಟಣೆಗಳನ್ನು ಪ್ರಕಟಿಸಿದ್ದು ಅದನ್ನು ಜನ ಸಾಮಾನ್ಯರಿಗೆ ಮುಟ್ಟಿಸುವ ದೃಷ್ಟಿಯಿಂದ ವರ್ಷದಲ್ಲಿ ನಾಲ್ಕು ಸಂದರ್ಭದಲ್ಲಿ ರಿಯಾಯತಿ ದರದಲ್ಲಿ ಮಾರಾಟ ಮಾಡುವ ಯೋಜನೆಯನ್ನು ರೂಪಿಸಿದ್ದಾರೆ.

ಅದರಂತೆ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಆಗಸ್ಟ್ ತಿಂಗಳಿಡೀ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣೆಗಳ ಮೇಲೆ ಶೇ 10ರಿಂದ ಶೇ 75ರವರೆಗೆ ರಿಯಾಯತಿ ನೀಡಲು ನಿರ್ಧರಿಸಲಾಗಿದೆ. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪುಸ್ತಕ ಮಾರಾಟ ವಿಭಾಗವು ಶನಿವಾರ, ಭಾನುವಾರಗಳೂ ಸೇರಿದಂತೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 7.00 ಗಂಟೆಯವರೆಗೂ ತೆರೆದಿರುತ್ತದೆ. ಈ ಸೌಲಭ್ಯದ ಉಪಯೋಗವನ್ನು ಪಡೆದು ಕೊಳ್ಳ ಬೇಕೆಂದು ನಾಡೋಜ ಡಾ.ಮಹೇಶ ಜೋಶಿಯವರು ಸಮಸ್ತ ಕನ್ನಡಿಗರನ್ನೂ ವಿನಂತಿಸಿ ಕೊಂಡಿದ್ದಾರೆ.

ಎನ್.ಎಸ್.ಶ್ರೀಧರ ಮೂರ್ತಿ
ಸಂಚಾಲಕರು, ಪ್ರಕಟಣಾ ವಿಭಾಗ
ಕನ್ನಡ ಸಾಹಿತ್ಯ ಪರಿಷತ್ತು

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)