೨೦೨೨-೨೩ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ.
ಕನ್ನಡ ಸಾಹಿತ್ಯ ಪರಿಷತ್ತು ೨೦೨೨-೨೩ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ೨೦೨೨ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಗಸ್ಟ್ ೩೧ ಕೊನೆಯ ದಿನಾಂಕ. ಸೆಪ್ಟೆಂಬರ್ ೧೫ರವರೆಗೆ ದಂಡ ಶುಲ್ಕ ರೂ. ೫೦-೦೦ ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು. ರೂ.೨೫-೦೦ ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿ ನಮೂನೆಯನ್ನು ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ ದಿನಾಂಕ ೦೧-೦೭-೨೦೨೨ರಿಂದ ಪಡೆಯಬಹುದು. ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ಮೂವತ್ತು ರೂಪಾಯಿ ಮನಿಯಾರ್ಡರ್ ಮಾಡಿದರೆ ಅರ್ಜಿ ನಮೂನೆಯನ್ನು ಅಂಚೆ ಮೂಲಕ ಕಳುಹಿಸಲಾಗುವುದು.
ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in ಮೂಲಕ ಸಹ ಪಡೆದುಕೊಳ್ಳಬಹುದು. ಇವರು ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ.೨೫/-ಗಳನ್ನು ಪ್ರತ್ಯೇಕವಾಗಿ ಪಾವತಿಸುವುದು.
ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-೧೮, ದೂರವಾಣಿ ಸಂಖ್ಯೆ ೦೮೦-೨೬೬೨೩೫೮೪, ೨೬೬೧೨೯೯೧,೨೨೪೨೩೮೬೭, ೨೬೬೭೨೯೯೨, 9739666834 ಇವರನ್ನು ಸಂಪರ್ಕಿಸಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರತಿಕ್ರಿಯೆ