ಎಂ. ಎಂ. ಕಲಬುರ್ಗಿ

ಮಲ್ಲೇಶಪ್ಪ ಮಡಿವಾಳಪ್ಪ ಕಲಬುರ್ಗಿಯವರು, ಕರ್ನಾಟಕದ ಪ್ರಸಿದ್ಧ ವಿದ್ವಾಂಸರಲ್ಲಿ ಒಬ್ಬರು. ಅವರ ಅಧ್ಯಯನ ಮತ್ತು ಕೊಡುಗೆಗಳು, ಶಾಸನಶಾಸ್ತ್ರ, ಸಾಹಿತ್ಯ ಚರಿತ್ರೆ, ಛಂದಸ್ಸು, ಇತಿಹಾಸ, ವಾಸ್ತುಶಿಲ್ಪ, ಗ್ರಂಥಸಂಪಾದನೆ, ಹಸ್ತಪ್ರತಿಶಾಸ್ತ್ರ, ಜಾನಪದ, ಸ್ಥಳನಾಮಗಳ ಅಧ್ಯಯನ, ಸಾಹಿತ್ಯ ವಿಮರ್ಶೆ ಮುಂತಾದ ಹತ್ತು ಹಲವು ಕ್ಷೇತ್ರಗಳಲ್ಲಿ ಹರಡಿಕೊಂಡಿವೆ. ಇವೆಲ್ಲದರ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಅಧ್ಯಯನದ ವಿಶಾಲವಾದ ಪರಿಪ್ರೇಕ್ಷ್ಯವಿದೆ. […]

ಸಿ.ಪಿ. ಕೃಷ್ಣಕುಮಾರ್

ಸಿ.ಪಿ.ಕೆ. ಎಂಬ ಮೂರಕ್ಷಗಳಿಂದ ಕನ್ನಡ ಸಾಹಿತ್ಯ ಲೋಕಕ್ಕೆ ಚಿರಪರಿಚಿತರಾಗಿರುವ  ಚಿಕ್ಕನಾಯಕನಹಳ್ಳಿ ಪುಟ್ಟೇಗೌಡ ಕೃಷ್ಣಕುಮಾರ್ ಅವರು ೮-೪-೧೯೩೯ರಲ್ಲಿ ಮೈಸೂರು ಜಿಲ್ಲೆಯ ಕೃಷ್ಣರಾಜ ನಗರದ ಚಿಕ್ಕನಾಯಕನಹಳ್ಳಿಯಲ್ಲಿ ಜನಿಸಿದರು. ಬಾಲ್ಯದ ವಿದ್ಯಾಭ್ಯಾಸವನ್ನು ಚಿಕ್ಕನಾಯಕನಹಳ್ಳಿ ಸಾಲಿಗ್ರಾಮದಲ್ಲಿ ಪೂರೈಸಿ ಮೈಸೂರಿನಲ್ಲಿ ಕಾಲೇಜು ಶಿಕ್ಷಣ ಮುಂದುವರಿಸಿ ೧೯೬೧ರಲ್ಲಿ ಎಂ.ಎ. ಪದವಿ ಗಳಿಸಿದರು. ೧೯೬೧ರಿಂದ ೧೯೬೪ರವರೆಗೆ ಪ್ರಾಚ್ಯ ವಿದ್ಯಾ […]

ಜಿ.ಎಸ್. ಶಿವರುದ್ರಪ್ಪ

ಕನ್ನಡದ ರಾಷ್ಟ್ರಕವಿಗಳಲ್ಲಿ ಒಬ್ಬರಾಗಿ ವಿಮರ್ಶಕರು ಕವಿಗಳೆಂದು ಪ್ರಸಿದ್ಧರಾದ ಡಾ.ಜಿ.ಎಸ್. ಶಿವರುದ್ರಪ್ಪನವರು ಗುಗ್ಗುರಿ ಶಾಂತವೀರಪ್ಪ ಮತ್ತು ವೀರಮ್ಮನವರ ಪುತ್ರರಾಗಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ೭-೨-೧೯೨೬ರಲ್ಲಿ ಜನಿಸಿದರು. ಶಾಲಾ ಉಪಾಧ್ಯಾಯರ ಮಗನಾದ ಜಿ.ಎಸ್.ಎಸ್(ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ) ಅವರು ಎಸ್.ಎಸ್.ಎಲ್.ಸಿ ಮುಗಿಯುತ್ತಿದ್ದಂತೆಯೇ ಬಡತನದಿಂದಾಗಿ ಸರಕಾರಿ ನೌಕರಿ ಹಿಡಿದು ದುಡಿಯಲಾರಂಭಿಸಿದರು. ಗುಬ್ಬಿ ತಾಲ್ಲೂಕು ಕಚೇರಿಯಲ್ಲಿ […]

ಪಾಟೀಲ ಪುಟ್ಟಪ್ಪ

ಪಾಟೀಲ ಪುಟ್ಟಪ್ಪ ಪತ್ರಿಕೋದ್ಯಮ, ಸಾಹಿತ್ಯ ರಚನೆ ಮತ್ತು ಕನ್ನಡ ಹೋರಾಟದಲ್ಲಿ ಗಣ್ಯರಾದ ಪಾಟೀಲ ಪುಟ್ಟಪ್ಪನವರು `ಪಾಪು’ ಎಂದೇ ಪ್ರಸಿದ್ಧರಾಗಿದ್ದಾರೆ. ಇವರು ಹಾವೇರಿ ಜಿಲ್ಲೆಯ ಕುರುಬಗೊಂಡ ಗ್ರಾಮದಲ್ಲಿ ಸಿದ್ಧಲಿಂಗಪ್ಪ-ಮಲ್ಲಮ್ಮ ದಂಪತಿಗಳಿಗೆ ೧೪-೧-೧೯೨೨ರಲ್ಲಿ ಜನಿಸಿದರು. ಶಾಲಾ ಶಿಕ್ಷಣವನ್ನು ಹಲಗೇರಿ, ಬ್ಯಾಡಗಿ, ಚಿತ್ರದುರ್ಗ, ಹಾವೇರಿಗಳಲ್ಲಿ ಮುಗಿಸಿ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಪದವಿ ಪೂರೈಸಿ […]

ದೇ. ಜವರೇಗೌಡ

ಕನ್ನಡಕ್ಕಾಗಿ ಹೋರಾಟ ಮಾಡಿದ ಕುವೆಂಪು ಅವರ ಪರಮಶಿಷ್ಯರಾದ ದೇ.ಜ.ಗೌ(ದೇವೇಗೌಡ ಜವರೇಗೌಡ) ಕೃಷಿಕ ಕುಟುಂಬದಿಂದ ಬಂದವರು. ದೇವೇಗೌಡ- ಚೆನ್ನಮ್ಮ ದಂಪತಿಗಳಿಗೆ ಚನ್ನಪಟ್ಟಣ ತಾಲ್ಲೂಕಿನ ಮೂಡಿಗೆರೆಯಲ್ಲಿ ೬-೭-೧೯೧೮ರಲ್ಲಿ ಜನಿಸಿದರು. ಚಕ್ಕೆರೆ, ಚನ್ನಪಟ್ಟಣಗಳಲ್ಲಿ ಶಾಲಾ ಶಿಕ್ಷಣ ಮುಗಿಸಿ ಬೆಂಗಳೂರಿನಲ್ಲಿ ಕಾಲೇಜು ವಿದ್ಯಾಭ್ಯಾಸ ಮಾಡಿ ಬಿ.ಎ ಪದವಿ ಗಳಿಸಿ ಕೆಲವು ಕಾಲ ಗುಮಾಸ್ತರಾಗಿ ಕೆಲಸ […]

1 2