ಸ್ವಾತಂತ್ರ್ಯ ಹೋರಾಟಗಾರ ಹಾಗೂ ಹಿರಿಯ ಸಾಹಿತಿ ನಾಡೋಜ ಡಾ. ಕೋ. ಚೆನ್ನಬಸಪ್ಪ ಅವರ ಜನ್ಮಶತಾಬ್ದಿ ಸಮಾರಂಭ

ಸ್ವಾತಂತ್ರ್ಯ ಹೋರಾಟಗಾರ ಹಾಗೂ ಹಿರಿಯ ಸಾಹಿತಿ ನಾಡೋಜ ಡಾ. ಕೋ. ಚೆನ್ನಬಸಪ್ಪ ಅವರ ಜನ್ಮಶತಾಬ್ದಿ ಸಮಾರಂಭ

ಕನ್ನಡ ಸಾಹಿತ್ಯ ಪರಿಷತ್ತು, ಕೋಚೆ ಸಾಹಿತ್ಯ ಮತ್ತು ಶಿಕ್ಷಣ ಟ್ರಸ್ಟ್ (ನೋಂ), ಕರ್ನಾಟಕ ಗಾಂಧಿ ಸ್ಮಾರಕ ನಿಧಿ (ನೋಂ) ಹಾಗೂ ಭಾರತೀಯ ವಿದ್ಯಾಭವನ ಇವರುಗಳ ಸಹಭಾಗಿತ್ವದಲ್ಲಿ ದಿನಾಂಕ 10-07-2022ರ ಭಾನುವಾರದಂದು ಬೆಳಿಗ್ಗೆ 10.30ಕ್ಕೆ ಗಾಂಧಿ ಭವನದಲ್ಲಿರುವ ಮಹದೇವ ದೇಸಾಯಿ ಸಭಾಂಗಣದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಹಿರಿಯ ಸಾಹಿತಿ ನಾಡೋಜ ಡಾ. ಕೋ. ಚೆನ್ನಬಸಪ್ಪ ಅವರ ಜನ್ಮಶತಾಬ್ದಿ ಸಮಾರಂಭವನ್ನು ಆಯೋಜಿಸಲಾಗಿದೆ.

ಈ ಸಮಾರಂಭವನ್ನು ಭಾರತದ ಸರ್ವೋಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ಶಿವರಾಜ ವಿ. ಪಾಟೀಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾದ ಡಾ. ಬಿ.ಎಲ್. ಶಂಕರ್, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರಾದ ನಾಡೋಜ ಡಾ. ವೂಡೇ ಪಿ. ಕೃಷ್ಣ, ಕೃಷಿ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀ ಶಿವಯೋಗಿ ಕಳಸದ ಇವರುಗಳು ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮೇರಿಲ್ಯಾಂಡ್ ಯೂನಿವರ್ಸಿಟಿಯ ಡೀನ್ ಆದ ಡಾ. ಪ್ರಭುದೇವ ಕೋಣನ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಮಾನ್ಯ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಮಧ್ಯಾಹ್ನ 12-30 ರಿಂದ 1-45ರ ವರೆಗೆ ನಡೆಯುವ ವಿಚಾರ ಗೋಷ್ಠಿಯ ಅಧ್ಯಕ್ಷತೆಯನ್ನು ಹಿರಿಯ ಪತ್ರಕರ್ತರಾದ ಶ್ರೀ ಲಕ್ಷ್ಮಣ ಕೊಡಸೆ ಅವರು ವಹಿಸಲಿದ್ದಾರೆ, ಆಕಾಶವಾಣಿಯ ವಿಶ್ರಾಂತ ನಿರ್ದೇಶಕರಾದ ಡಾ. ಬಸವರಾಜ ಸಾದರ ಅವರು ಕೋಚೆ ಮತ್ತು ಪ್ರಗತಿಶೀಲ ಸಾಹಿತ್ಯ ಚಳವಳಿ ಕುರಿತು ಹಾಗೂ ಹಿರಿಯ ಸಾಹಿತಿಗಳಾದ ಪ್ರೊ. ಕೆ.ಎಸ್. ಮಧುಸೂದನ ಅವರು ಕೋಚೆ ಅವರ ಅರವಿಂದ ಸಾಹಿತ್ಯ ಅನುವಾದಗಳು _ ಕುರಿತು ವಿಷಯ ಮಂಡಿಸಲಿದ್ದಾರೆ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷರಾದ ಶ್ರೀ ಬಿ.ಎಂ. ಪಟೇಲ್ ಪಾಂಡು ಅವರು ಗೋಷ್ಟಿಯಲ್ಲಿ ಉಪಸ್ಥಿತರಿರುವರು.

ಮಧ್ಯಾಹ್ನ 3-00 ರಿಂದ 4-00ರ ವರೆಗೆ ನಡೆಯುವ ‘ನಾನು ಕಂಡಂತೆ ಕೋಚೆ’ ಕುರಿತು ಹಿರಿಯ ಸಂಶೋಧಕರಾದ ಡಾ. ವೀರಶೆಟ್ಟಿ ಬಿ. ಗಾರಂಪಳ್ಳಿ, ಸಾಹಿತಿಗಳಾದ ಶ್ರೀ ಪ್ರಕಾಶ ಗಿರಿಮಲ್ಲನವರ, ಕೋಚೆ ಅವರ ಮಗಳಾದ ಶ್ರೀಮತಿ ಶಾಂತ ಜಯಪ್ರಸಾದ್, ರಾಮಯ್ಯ ಮೆಮೋರಿಯಲ್ ಆಸ್ಪತ್ರೆಯ ಅಧ್ಯಕ್ಷರಾದ ಡಾ. ಕೆ.ಸಿ. ಗುರುದೇವ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀ ಕೆ.ಬಿ. ಗುದಗಿ ಅವರುಗಳು ಮಾತನಾಡಲಿದ್ದಾರೆ.

ಸಂಜೆ 4-00 ರಿಂದ 5-30ರ ವರೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಭಾರತದ ಸರ್ವೋಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ಸಂತೋಷ್ ಹೆಗ್ಡೆ ಅವರು ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಭಾರತೀಯ ವಿದ್ಯಾಭವನದ ಅಧ್ಯಕ್ಷರಾದ ಶ್ರೀ ಕೆ.ಜಿ. ರಾಘವನ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರಾದ ಶ್ರೀ ಕೆ.ಎ. ದಯಾನಂದ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶ್ರೀ ನೇ.ಭ. ರಾಮಲಿಂಗಶೆಟ್ಟಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಮಾನ್ಯ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಸಮಾರೋಪ ನುಡಿಗಳನ್ನಾಡಲಿದ್ದಾರೆ.

ಶ್ರೀನಾಥ ಜೆ.
ಮಾಧ್ಯಮ ಸಲಹೆಗಾರರು
ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು
KASAPA_Dr.Ko.Channabasappa janmasatbdi_Patrika Prakatane _ 08-07-2022.
Nadoja Ko Channabasappa Invitation 4pages

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)