ಆಸ್ಟ್ರೇಲಿಯಾ ದೇಶದ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕದ ಗೌರವ ಅಧ್ಯಕ್ಷರಾಗಿ ಸತೀಶ್ ಭದ್ರಣ್ಣ ನೇಮಕ

ಆಸ್ಟ್ರೇಲಿಯಾ ದೇಶದ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕದ ಗೌರವ ಅಧ್ಯಕ್ಷರಾಗಿ ಸತೀಶ್ ಭದ್ರಣ್ಣ ನೇಮಕ

ಸತೀಶ ಭದ್ರಪ್ಪ

ಭಾವಚಿತ್ರ- ಆಸ್ಟ್ರೇಲಿಯಾ ದೇಶದ ಕನ್ನಡ ಸಾಹಿತ್ಯ ಪರಿಷತ್ತಿನ ಹೊರದೇಶ ಘಟಕದ ಗೌರವ ಅಧ್ಯಕ್ಷರಾಗಿ ಶ್ರೀ ಸತೀಶ್ ಭದ್ರಣ್ಣ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರಿಂದ ಆದೇಶ ಪ್ರತಿ ಹಸ್ತಾಂತರ.

ಬೆಂಗಳೂರು : ಆಸ್ಟ್ರೇಲಿಯಾ ದೇಶದ ಕನ್ನಡ ಸಾಹಿತ್ಯ ಪರಿಷತ್ತಿನ ಹೊರದೇಶ ಘಟಕದ ಗೌರವ ಅಧ್ಯಕ್ಷರಾಗಿ ಶ್ರೀ ಸತೀಶ್ ಭದ್ರಣ್ಣ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ನೇಮಕ ಮಾಡಿ ಆದೇಶ ನೀಡಿದ್ದಾರೆ.

ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆಗಾಗಿ ಶ್ರಮಿಸುತ್ತಿರುವ ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತು, ಎಲ್ಲ ಕನ್ನಡ ಸಂಘ-ಸಂಸ್ಥೆಗಳ ಮಾತೃ ಸಂಸ್ಥೆಯಾಗಿದೆ.

ಇದೀಗ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷಾವಧಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆಗಳಿಗೆ ತಿದ್ದುಪಡಿ ತಂದು ವಿದೇಶಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕಗಳನ್ನು ಸ್ಥಾಪಿಸಲು ಅವಕಾಶ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವಿದೇಶಗಳಲ್ಲಿ ಘಟಕಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳುತ್ತಿದೆ. ಕನ್ನಡಿಗರು ಹೆಚ್ಚಾಗಿರುವ ವಿದೇಶಿ ನೆಲದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಘಟಕಗಳನ್ನು ಸ್ಥಾಪಿಸುವ ಮೂಲಕ ಪ್ರಪಂಚದಲ್ಲಿರುವ ಎಲ್ಲ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶವನ್ನು ಹೊಂದಿದೆ.

ಆಸ್ಟ್ರೇಲಿಯಾ ದೇಶದಲ್ಲಿ ಕನ್ನಡಪರ ಕಾರ್ಯಚಟುವಟಿಕೆಗಳನ್ನು ಕ್ರಿಯಾಶೀಲವಾಗಿ ನಡೆಸುವುದರ ಮೂಲಕ ಕನ್ನಡ ನಾಡು-ನುಡಿಯ ಸೇವೆಯನ್ನು ಸಲ್ಲಿಸುತ್ತಿರುವ ಸತೀಶ ಭದ್ರಣ್ಣ ಅವರಿಂದ ಹೆಚ್ಚು ಹೆಚ್ಚು ಕನ್ನಡ ಭಾಷೆ, ಕಲೆ- ಸಂಸ್ಕೃತಿ, ಸಾಹಿತ್ಯದ ಏಳಿಗೆಗೆ ಇನ್ನಷ್ಟು ಸೇವೆ ನೀಡಲಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಆಶಿಸಿದ್ದಾರೆ.

ಈ ಹಿಂದೆ ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡುವ ಮೂಲಕ ಕನ್ನಡಿಗರೆಲ್ಲರ ಪ್ರೀತಿಗೆ ಪಾತ್ರರಾಗಿದ್ದ ಶ್ರೀ ಚಂದ್ರ ಆರ್ಯ ಅವರನ್ನು ಕೆನಾಡ ದೇಶದ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿರುವುದನ್ನು ಡಾ. ಮಹೇಶ ಜೋಶಿ ಸ್ಮರಿಸಿದ್ದಾರೆ.

ಶ್ರೀನಾಥ್‌ ಜೆ.
ಮಾಧ್ಯಮ ಸಲಹೆಗಾರರು
ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು
Kasapa-ಆಸ್ರೇಲಿಯಾ ಕನ್ನಡ ಘಟಕ್ಕೆ ಸತೀಶ್_ ಭದ್ರಣ್ಣ ಆಯ್ಕೆ - 13-09-2022

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)