ಡಿ. ೩೦ ರಿಂದ ಮೂರು ದಿನಗಳ ಕಾಲ ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಸಾಹಿತ್ಯ ಪರೀಕ್ಷೆ

ಡಿ. ೩೦ ರಿಂದ ಮೂರು ದಿನಗಳ ಕಾಲ ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಸಾಹಿತ್ಯ ಪರೀಕ್ಷೆ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ೨೦೨೨-೨೩ನೇ ಸಾಲಿನ ಸಾಹಿತ್ಯ ಪರೀಕ್ಷೆಗೆ ದಿನಾಂಕ ಪ್ರಕಟಿಸಲಾಗಿದೆ, ಏಕ ಕಾಲದಲ್ಲಿ ರಾಜ್ಯದ ವಿವಿಧ ೧೮ ಪರೀಕ್ಷಾ ಕೇಂದ್ರಗಳಲ್ಲಿ ಮೂರು ದಿನಗಳ ಕಾಲ ಪರೀಕ್ಷೆ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ನೇ.ಭ.ರಾಮಲಿಂಗ ಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

೨೦೨೨-೨೩ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳನ್ನು ಇದೇ ಡಿಸೆಂಬರ್ ೩೦, ೩೧ ಮತ್ತು ೨೦೨೩ನೇ ಜನವರಿ ೦೧ ರಂದು ಒಟ್ಟು ೩ ದಿನಗಳ ಕಾಲ ರಾಜ್ಯದ ೧೮ ಕೇಂದ್ರಗಳಲ್ಲಿ ನಡೆಯಲಿದೆ.

ಈಗಾಗಲೇ ಈ ಸಂಬಂಧಪಟ್ಟ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಮತ್ತು ಪರೀಕ್ಷಾ ವೇಳಾಪಟ್ಟಿಯನ್ನು ಅಂಚೆ ಮೂಲಕ ಕಳುಹಿಸಲಾಗಿದೆ. ಪರೀಕ್ಷಾ ಅಭ್ಯರ್ಥಿಗಳಿಗೆ ಡಿಸೆಂಬರ್‌ ೨೦ರ ನಂತರವೂ ಪ್ರವೇಶ ಪತ್ರ ಹಾಗೂ ವೇಳಾಪಟ್ಟಿ ತಲುಪದಿದ್ದ ಪಕ್ಷದಲ್ಲಿ ಅಂಥಹ ಅಭ್ಯರ್ಥಿಗಳು, ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-೧೮, ಇವರಲ್ಲಿ ವಿಚಾರಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೦-೨೬೬೨೩೫೮೪ / ೨೬೬೧೨೯೯೧ ಹಾಗೂ ಮೊ. ೮೬೬೦೭೭೭೬೪೩ / ೯೭೩೯೬೬೬೮೩೪. ಅಂತರ್ಜಾಲ ತಾಣ www.kasapa.in ಮೂಲಕ ಸಹ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ನೇ.ಭ.ರಾಮಲಿಂಗ ಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಶ್ರೀನಾಥ್‌ ಜೆ.
ಮಾಧ್ಯಮ ಸಲಹೆಗಾರರು
ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು
Kasapa-ಸಾಹಿತ್ಯ ಪರೀಕ್ಷೆ ದಿನಾಂಕ ಪ್ರಕಟ -12-12-2022
Time table _ 20222-23 Sahitya Parikshe

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)