ನಾಳೆ (ಫೆಬ್ರವರಿ 1) ರಂದು ಮಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಮಂಡ್ಯ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ನಾಳೆ (ಫೆಬ್ರವರಿ 1) ರಂದು ಮಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಮಂಡ್ಯ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಮಂಡ್ಯದಲ್ಲಿ ಅಯೋಜಿತವಾಗಿರುವ 87ನೆಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು ಸಂಬಂಧ ಪಟ್ಟವರ ಸಭೆಯನ್ನು 1.2.2024ರ ಗುರುವಾರ ಸಂಜೆ 5.00 ಗಂಟೆಗೆ ಗೃಹ ಕಚೇರಿಯಲ್ಲಿ ಸಂಬಂಧ ಪಟ್ಟವರ ಸಭೆಯನ್ನು ಮಖ್ಯಮಂತ್ರಿಗಳು ಕರೆದಿದ್ದಾರೆ. ಈ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಕಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರು, ಜಿಲ್ಲಾ ಉಸ್ತವಾರಿ ಸಚಿವರು, ಮಂಡ್ಯ ಜಿಲ್ಲೆಯ ಎಲ್ಲಾ ಶಾಸಕರು, ಮಂಡ್ಯ ಜಿಲ್ಲಾಧಿಕಾರಿಗಳು, ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕರು ಸೇರಿದಂತೆ ಸಮ್ಮೇಳನಕ್ಕೆ ಸಂಬಂಧ ಪಟ್ಟವರು ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಅಯ-ವ್ಯಯದಲ್ಲಿ 25 ಕೋಟಿಗಳನ್ನು ಸಮ್ಮೇಳನಕ್ಕೆ ಮೀಸಲಿಡುವಂತೆ ಮತ್ತು ಸಮ್ಮೇಳನದ ದಿನಾಂಕಗಳನ್ನು ನಿಗದಿ ಪಡಿಸುವಂತೆ ಮುಖ್ಯಮಂತ್ರಿಗಳನ್ನು ಪ್ರಮುಖವಾಗಿ ಕೋರಲಿದೆ. ಇದರ ಜೊತೆಗೆ ಸಮ್ಮೇಳನದ ಸ್ವರೂಪದ ಬಗ್ಗೆ ಕೂಡ ಚರ್ಚೆಗಳಾಗಲಿವೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ತಿಳಿಸಿದ್ದಾರೆ.

‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-2023’ರಲ್ಲಿನ ಕನ್ನಡ ನಾಮ ಫಲಕಗಳ ಕುರಿತ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕದೆ ವಿದೇಯಕದ ಮೂಲಕವೇ ತರಲು ಸೂಚಿಸಿರುವ ಹಿನ್ನೆಲೆಯಲ್ಲಿ ವಿಧೇಯಕದ ಪರಿಣಾಮಕಾರಿ ಅನುಷ್ಟಾನಕ್ಕೆ ಕೆಲವು ಮಹತ್ವದ ಬದಲಾವಣೆಗಳು ಆಗ ಬೇಕಿದೆ. ಜನರಿಂದ ನೇರವಾಗಿ ಚುನಾಯಿತರಾದ ‘ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರನ್ನು ಈ ವಿಧೇಯಕ ಸೂಚಿಸಿರುವ ಸಮಿತಿಯಲ್ಲಿ ಉಪಾಧ್ಯಕ್ಷ’ರನ್ನಾಗಿ ಮಾಡುವುದು ಅಗತ್ಯವಾಗಿದೆ. ಈ ಹಿಂದಿನ ವಿಧೇಯಕದ ಕರಡಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಸದಸ್ಯರಾಗಿದ್ದರು. ಆದರೆ ಅಂಗೀಕಾರಗೊಂಡ ಅಧಿನಿಯಮದಲ್ಲಿ ಅವರು ಕೇವಲ ಆಹ್ವಾನಿತರಾಗಿದ್ದಾರೆ. ಮಂತ್ರಿಗಳ ಸ್ಥಾನಮಾನವನ್ನು ಹೊಂದಿರುವ ಅಧ್ಯಕ್ಷರು ಹೀಗೆ ಕೇವಲ ಆಹ್ವಾನಿತರಾಗಿರುವುದು ಇಡೀ ಸಮಿತಿಯ ಕೇವಲ ಅಧಿಕಾರಿಗಳ ತಂಡವಾಗಿ ಜನಪರ ಕೆಲಸಗಳು ಸಾಧ್ಯವಾಗದೆ ಹೋಗುತ್ತದೆ. ಈ ಅಂಶವನ್ನು ಹಿಂದಿನ ಮುಖ್ಯಮಂತ್ರಿಗಳ ಗಮನಕ್ಕೆ ತಂದಾಗ ಅವರು ಮೊದಲು ವಿಧೇಯಕ ಅಂಗೀಕಾರಗೊಳ್ಳಲಿ ನಂತರ ತಿದ್ದುಪಡಿಗಳನ್ನು ಮಾಡೋಣವೆಂದಿದ್ದರು. ಈಗ ತಿದ್ದುಪಡಿಗಳನ್ನು ಮಾಡುವ ಸಂದರ್ಭದಲ್ಲಿ ಇದನ್ನು ಗಮನಿಸ ಬೇಕು ಎನ್ನುವುನ್ನು ಮುಖ್ಯಮಂತ್ರಿಗಳ ಗಮಕ್ಕೆ ತರಲಾಗುವದು ಎಂದು ನಾಡೋಜ ಡಾ.ಮಹೇಶ ಜೋಶಿಯವರು ತಿಳಿಸಿದ್ದಾರೆ.

ಎನ್.ಎಸ್.ಶ್ರೀಧರ ಮೂರ್ತಿ
ಸಂಚಾಲಕರು, ಪ್ರಕಟಣಾ ವಿಭಾಗ
ಕನ್ನಡ ಸಾಹಿತ್ಯ ಪರಿಷತ್ತು

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)