ಹಂಚೆಟ್ಟರ ಫ್ಯಾನ್ಸಿ ಮುತ್ತಣ್ಣ ಮತ್ತು ಡಾ.ಅಮರೇಂದ್ರ ಹೊಲ್ಲಂಬಳ್ಳಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ‘’ಸತ್ಯವತಿ ವಿಜಯರಾಘವ ಚಾರಿಟಬಲ್ ಟ್ರಸ್ಟ್ ಧರ್ಮದರ್ಶಿ ದತ್ತಿ ಪ್ರಶಸ್ತಿ’’

ಹಂಚೆಟ್ಟರ ಫ್ಯಾನ್ಸಿ ಮುತ್ತಣ್ಣ ಮತ್ತು ಡಾ.ಅಮರೇಂದ್ರ ಹೊಲ್ಲಂಬಳ್ಳಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ‘’ಸತ್ಯವತಿ ವಿಜಯರಾಘವ ಚಾರಿಟಬಲ್ ಟ್ರಸ್ಟ್ ಧರ್ಮದರ್ಶಿ ದತ್ತಿ ಪ್ರಶಸ್ತಿ’’

WhatsApp Image 2024-02-15 at 10.43.36 AM
WhatsApp Image 2024-02-15 at 10.43.38 AM

ಬೆಂಗಳೂರು:

2023ರ ಕನ್ನಡ ಸಾಹಿತ್ಯ ಪರಿಷತ್ತಿನ ‘ಸತ್ಯವತಿ ವಿಜಯರಾಘವ ಚಾರಿಟಬಲ್ ಟ್ರಸ್ಟ್’ ದತ್ತಿ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಕುಶಾಲ ನಗರದ ಬರಹಗಾರರಾದ ಹಂಚೆ‍ಟ್ಟರ ಫ್ರಾನ್ಸಿ ಮುತ್ತಣ್ಣ ಮತ್ತು ಕೋಲಾರ ಜಿಲ್ಲೆಯ ಡಾ.ಅಮರೇಂದ್ರ ಹೊಲ್ಲಂಬಳ್ಳಿಯವರು ಆಯ್ಕೆಯಾಗಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯು ದತ್ತಿಯ ನಿಯಮಗಳನ್ನು ಪರಿಶೀಲಿಸಿ ಈ ಆಯ್ಕೆಯನ್ನು ಮಾಡಿದೆ.

ಕನ್ನಡಿಗರೆಲ್ಲರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಅಪಾರವಾದ ಗೌರವದಿಂದ ಡಾ.ಎ.ಪುಷ್ಪಾ ಅಯ್ಯಂಗಾರ್, ಮೈಸೂರು ಅವರು ಈ ದತ್ತಿಯನ್ನು ಸ್ಥಾಪಿಸಿದ್ದು ಕನ್ನಡ ನಾಡು-ನುಡಿ, ನೆಲ, ಜಲ ಕುರಿತ ಚಿಂತಕರು, ಕೃತಿ ರಚನೆಕಾರರು, ಕನ್ನಡ ಪರ ಹೋರಾಟಗಾರರು ಅಥವಾ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅನುಪಮ ಸೇವೆ ಸಲ್ಲಿಸಿದವರಿಗೆ ಈ ಪುರಸ್ಕಾರವನ್ನು ನೀಡಲಾಗುವುದು.

2023ರ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿರುವ ಶ್ರೀಮತಿ ಹಂಚೆಟ್ಟಿರ ಫಾನ್ಸಿ ಮುತ್ತಣ್ಣನವರು ಕನ್ನಡ ಮತ್ತು ಕೊಡವ ಭಾಷೆಯಲ್ಲಿ ಸಾಕಷ್ಟು ಸಾಧನೆಯನ್ನು ಮಾಡಿದ್ದಾರೆ. ಕೊಡಗು ಜಿಲ್ಲೆಯ ಇತಿಹಾಸ ಮತ್ತು ಮಹಿಳಾ ಸಮಸ್ಯೆಗಳ ಕುರಿತು ವಿಶೇಷ ಅಧ್ಯಯನವನ್ನು ನಡೆಸಿದ್ದಾರೆ. ಹಲವು ಸಂಘಟನೆಗಳ ಪ್ರಧಾನ ಹುದ್ದೆಯಲ್ಲಿದ್ದು ಸಂಘಟನಾತ್ಮಕ ಕಾರ್ಯವನ್ನು ನಿರ್ವಹಿಸಿದ್ದಾರೆ. ಕಾಡು ಹಕ್ಕಿಯ ಹಾಡು, ಕಾಡಿದ ನೆನಪುಗಳು, ಕನವರಿಕೆ, ಒಡಲ ಉರಿ ಮೊದಲಾದ ಅನೇಕ ಕೃತಿಗಳನ್ನು ಅವರು ರಚಿಸಿದ್ದಾರೆ.
2023ರ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿರುವ ಇನ್ನೊಬ್ಬ ಬರಹಗಾರ ಡಾ.ಅಮರೇಂದ್ರ ಹೊಲ್ಲಂಬಳ್ಳಿಯವರು ಕೋಲಾರ ಜಿಲ್ಲೆಯ ಹೊಲ್ಲಂಬಳ್ಳಿಯವರು. ‘ಕನ್ನಡ ಸಣ್ಣಕತೆಗಳು ಮತ್ತು ಜಾಗತೀಕರಣ: ತಾತ್ವಿಕ ಮುಖಾಮುಖಿ’ ಎನ್ನುವ ವಿಷಯದಲ್ಲಿ ಸಂಶೋಧನೆ ನಡೆಸಿ ಪಿ.ಎಚ್.ಡಿ ಪದವಿಯನ್ನು ಪಡೆದಿದ್ದಾರೆ. ಕಥೆ, ನಾಟಕ, ಕಾದಂಬರಿ, ವಿಮರ್ಶೆ ಹೀಗೆ ಎಲ್ಲಾ ಪ್ರಕಾರಗಳಲ್ಲಿಯೂ ಬರವಣಿಗೆ ಮಾಡಿರುವ ಇವರ ಪ್ರಮುಖ ಕೃತಿಗಳೆಂದರೆ ವಾಲ್ ಪೇಪರ್, ಬಣ್ಣದ ನೆರಳು, ಕಾಯ, ಚಂದ್ರಗುಪ್ತ, ಮರು ಮಾತು ಮೊದಲಾದವು.

ದತ್ತಿ ಪ್ರಶಸ್ತಿ ಪುರಸ್ಕೃತರಾದ ಹಂಚೆಟ್ಟರ ಫ್ರಾನ್ಸಿ ಮುತ್ತುಣ್ಣ ಮತ್ತು ಡಾ.ಅಮರೇಂದ್ರ ಹೊಲ್ಲಂಬಳ್ಳಿಯವರನ್ನು ಕನ್ನಡ ಸಾಹಿತ್ಯ ಪರಿಷತ್ತು ವಿಶೇಷವಾಗಿ ಅಭಿನಂದಿಸಿ ಅವರ ಬರಹದ ಬದುಕಿಗೆ ಶುಭವನ್ನು ಕೋರುತ್ತದೆ.

ನ್.ಎಸ್.ಶ್ರೀಧರ ಮೂರ್ತಿ
ಸಂಚಾಲಕರು, ಪ್ರಕಟಣಾ ವಿಭಾಗ,
ಕನ್ನಡ ಸಾಹಿತ್ಯ ಪರಿಷತ್ತು

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)