ಮಂಡ್ಯದಲ್ಲಿ ನಡೆಯುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕರಾಗಿ ಮೀರಾ ಶಿವಲಿಂಗಯ್ಯ, ಗೌರವ ಕಾರ್ಯದರ್ಶಿಗಳಾಗಿ ವಿ.ಹರ್ಷ ಹಾಗೂ ನಾಗಮಂಗಲ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಸಿ.ಆರ್.ಚಂದ್ರಶೇಖರ ಅವರ ನಾಮ ನಿರ್ದೇಶನ.

ಮಂಡ್ಯದಲ್ಲಿ ನಡೆಯುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕರಾಗಿ ಮೀರಾ ಶಿವಲಿಂಗಯ್ಯ, ಗೌರವ ಕಾರ್ಯದರ್ಶಿಗಳಾಗಿ ವಿ.ಹರ್ಷ ಹಾಗೂ ನಾಗಮಂಗಲ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಸಿ.ಆರ್.ಚಂದ್ರಶೇಖರ ಅವರ ನಾಮ ನಿರ್ದೇಶನ.

ಬೆಂಗಳೂರು: ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕಳೆದ ಎರಡು ಅವಧಿಯಿಂದಲೂ ಕನ್ನಡಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದ ಸಿ.ಕೆ.ರವಿಕುಮಾರ ಚಾಮಲಾಪುರ ಇವರು ದಿನಾಂಕ 4 ಮಾರ್ಚಿ 2024ರಂದು ನಿಧನ ಹೊಂದಿದ್ದರಿಂದ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಸ್ಥಾನ ತೆರವಾಗಿತ್ತು, ಈಗಾಗಲೇ ಪೂರ್ವ ನಿರ್ಧಾರಗೊಂಡಂತೆ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20, 21 ಮತ್ತು 22 ಶುಕ್ರವಾರ, ಶನಿವಾರ ಹಾಗೂ ಭಾನುವಾರ ದಂದು ಮಂಡ್ಯದಲ್ಲಿ ಜರಗುವುದರಿಂದ ಜಿಲ್ಲೆಯಲ್ಲಿ ಅದಕ್ಕೆ ಸಂಬಂಧಿಸಿದ ಕಾರ್ಯ ಚಟುವಟಿಕೆಗಳು ತಕ್ಷಣದಿಂದಲೇ ಜಾರಿಯಾಗಬೇಕಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅನುಮೋದಿತ ತಿದ್ದುಪಡಿ ನಿಬಂಧನೆ 33(2) (ಅ) ರಂತೆ ‘ ಸಮ್ಮೇಳನ ಜರುಗಲಿರುವ ಜಿಲ್ಲೆಯ ಚುನಾಯಿತ ಅಧ್ಯಕ್ಷರ ಸ್ಥಾನ ಯಾವುದೇ ಕಾರಣದಿಂದ ತೆರವಾದಲ್ಲಿಅಥವಾ ಜಿಲ್ಲಾಧ್ಯಕ್ಷರ ಆರೋಗ್ಯ ಸಮಸ್ಯೆಯ ಕಾರಣದಿಂದಾಗಿ ಅಥವಾ ಮತ್ತ್ಯಾವುದೇ ಕಾರಣದಿಂದಾಗಿ ಸಮ್ಮೇಳನದ ಪೂರ್ವಸಿದ್ಧತೆಗಳನ್ನು ಒಳಗೊಂಡಂತೆ ಎಲ್ಲಾ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಮರ್ಥರಾಗಿಲ್ಲದ ಪಕ್ಷದಲ್ಲಿ,ಅವರು ನಿಯಮಗಳಿಗನುಸಾರ ನಿರ್ವಹಿಸಬೇಕಾದ ಎಲ್ಲಾ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಲಿಕ್ಕಾಗಿ ಕೇಂದ್ರ ಪರಿಷತ್ತಿನ ಅಧ್ಯಕ್ಷರು ಸಮಿತಿಯೊಂದನ್ನು ರಚಿಸಿ, ಆ ಸಮಿತಿಯು ಅವರ ಉಸ್ತುವಾರಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.’

ಈ ಅನುಮೋದಿತ ತಿದ್ದುಪಡಿ ನಿಬಂಧನೆ 33(2) (ಅ) ರಂತೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಮೀರಾ ಶಿವಲಿಂಗಯ್ಯ ಅವರನ್ನು ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ‘ಸಂಚಾಲಕ’ರನ್ನಾಗಿಯೂ, ವಿ.ಹರ್ಷ ಅವರನ್ನು ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ‘ಗೌರವ ಕಾರ್ಯದರ್ಶಿ’ಯಾಗಿಯೂ ಮತ್ತು ಸಿ.ಆರ್.ಚಂದ್ರಶೇಖರ ಅವರನ್ನು ನಾಗಮಂಗಲ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿಯೂ ನೇಮಕ ಮಾಡಿರುತ್ತಾರೆ. ಈ ನೇಮಕಾತಿಗಳು 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಕ್ತಾಯವಾಗುವವರೆಗೂ ಮಾತ್ರ ಜಾರಿಯಲ್ಲಿ ಇರುತ್ತವೆ ಎಂದು ನಾಡೋಜ ಡಾ.ಮಹೇಶ ಜೋಶಿ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎನ್.ಎಸ್.ಶ್ರೀಧರ ಮೂರ್ತಿ
ಸಂಚಾಲಕರು, ಪ್ರಕಟಣಾ ವಿಭಾಗ
ಕನ್ನಡ ಸಾಹಿತ್ಯ ಪರಿಷತ್ತು

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)