ಸೆ.15 ರಂದು ಸಂಜೆ 5.00 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಪ್ರದರ್ಶನ ಫಲಕಗಳ ಅನಾವರಣ ಮತ್ತು ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯರವರ ಜನ್ಮದಿನಾಚರಣೆ ಹಾಗೂ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ

ಸೆ.15 ರಂದು ಸಂಜೆ 5.00 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಪ್ರದರ್ಶನ ಫಲಕಗಳ ಅನಾವರಣ ಮತ್ತು ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯರವರ ಜನ್ಮದಿನಾಚರಣೆ ಹಾಗೂ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ

IMG-20240913-WA0093

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಸೆಪ್ಟೆಂಬರ್ ಸಂಜೆ 5.00 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಪ್ರದರ್ಶನ ಫಲಕಗಳ ಅನಾವರಣ ಮತ್ತು ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯರವರ ಜನ್ಮದಿನಾಚರಣೆ ಹಾಗೂ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್ ಭಾ.ಆ.ಸೇ, ಅವರು ಕಾರ್ಯಕ್ರಮ ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ದರ್ಶನ್ ಪುಟ್ಟಣ್ಣಯ್ಯರವರು ವಿಶೇಷ ಅತಿಥಿಗಳಾಗಿ ಆಗಮಿಸಲಿದ್ದು, ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ರಮೇಶಚಂದ್ರ ಲಹೋಟಿಯವರು ಮುಖ್ಯ ಅತಿಥಿಗಳಾಗಿ ನಮ್ಮೊಂದಿಗಿರುತ್ತಾರೆ. ಶಾಸನ ತಜ್ಞರು ಹಾಗೂ ದತ್ತಿ ದಾನಿಗಳಾದ ಡಾ.ಎಂ.ಜಿ. ನಾಗರಾಜ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ಇತಿಹಾಸಕಾರರು ಮತ್ತು ಕಾದಂಬರಿಕಾರರಾದ ಡಾ. ಗಜಾನನ ಶರ್ಮರವರು ಸರ್. ಎಂ. ವಿಶ್ವೇಶ್ವರಯ್ಯರವರ ಕುರಿತು ವಿಶೇಷ ಉಪನ್ಯಾಸ ಮಾಡಲಿದ್ದಾರೆ.

2024ನೆಯ ಸಾಲಿನ ʻಗೌರಮ್ಮ ಗಂಗಾಧರಯ್ಯ ಮಕ್ಕಳ ಸಿಬ್ಬಂದಿ ಸೇವಾ ದತ್ತಿ ಪ್ರಶಸ್ತಿʼಯನ್ನು ಶ್ರೀ ಎಂ.ಎನ್. ಸತೀಶ್ ಕುಮಾರ್ ಅವರಿಗೆ ಹಾಗೂ ʻಶ್ರೀಮತಿ ರಮಾದೇವಿ ವಿಶ್ವೇಶ್ವರಯ್ಯ ದತ್ತಿ ಪ್ರಶಸ್ತಿʼಯನ್ನು ಶ್ರೀ ಶ್ರೀ ದಯಾನಂದ ಮೂರ್ತಿ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎನ್.ಎಸ್.ಶ್ರೀಧರ ಮೂರ್ತಿ
ಸಂಚಾಲಕರು, ಪ್ರಕಟಣಾ ವಿಭಾಗ
ಕನ್ನಡ ಸಾಹಿತ್ಯ ಪರಿಷತ್ತು

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)