ಕನ್ನಡಿಗರು ಸ್ವಾಭಿಮಾನಿಗಳಾಗ ಬೇಕು: ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ನೇ.ಭ.ರಾಮಲಿಂಗ ಶೆಟ್ಟಿ ಕರೆ

ಕನ್ನಡಿಗರು ಸ್ವಾಭಿಮಾನಿಗಳಾಗ ಬೇಕು: ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ನೇ.ಭ.ರಾಮಲಿಂಗ ಶೆಟ್ಟಿ ಕರೆ

WhatsApp Image 2024-11-01 at 3.01.08 PM

ಬೆಂಗಳೂರು: ಕನ್ನಡಿಗರು ಇನ್ನಷ್ಟು ಸ್ವಾಭಿಮಾನಿಗಳಾಗ ಬೇಕು ನಮ್ಮ ನಾಡು-ನುಡಿಯ ಬಗ್ಗೆ ಮುಖ್ಯವಾಗಿ ಕನ್ನಡಿಗರ ಹಕ್ಕುಗಳ ಬಗ್ಗೆ ಜಾಗೃತರಾಗ ಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ನೇ.ಭ.ರಾಮಲಿಂಗ ಶೆಟ್ಟರು ಕರೆ ನೀಡಿದರು. ಅವರು ಇಂದು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ 69ನೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾದಾಗ ಬೆರಳೆಣಿಕೆಯಷ್ಟು ಕನ್ನಡ ಸಂಘಗಳಿದ್ದವು, ಕನ್ನಡ ಮಾತನಾಡುವವರು ಹಲವು ಪ್ರಾಂತ್ಯಗಳಲ್ಲಿ ಹಂಚಿ ಹೋಗಿದ್ದರು. ಅವರೆಲ್ಲರನ್ನೂ ಬೆಸೆದು ‘ಕನ್ನಡತನ’ವನ್ನು ಉಳಿಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬಹಳ ಮಖ್ಯವಾದ ಪಾತ್ರವನ್ನು ನಿರ್ವಹಿಸಿದೆ. ಕರ್ನಾಟಕ ಏಕೀಕರಣ ಮತ್ತು ನಾಮಕರಣ ಎರಡರಲ್ಲಿಯೂ ಕನ್ನಡ ಸಾಹಿತ್ಯ ಪರಿಷತ್ತು ಬಹಳ ಮುಖ್ಯವಾದ ಕೊಡುಗೆಗಳನ್ನು ನೀಡಿದೆ. ನಾಡೋಜ ಡಾ.ಮಹೇಶ ಜೋಶಿಯವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮೇಲೆ ಪರಿಷತ್ತಿನ ವ್ಯಾಪ್ತಿಯನ್ನು ಗಮನಾರ್ಹವಾಗಿ ಹಿಗ್ಗಿಸಿದ್ದಾರೆ. ಕನ್ನಡ-ಕನ್ನಡಿಗ-ಕರ್ನಾಟಕದ ಹಿತವನ್ನು ಕಾಪಾಡುವ ಹಲವು ಕ್ರಿಯಾಶೀಲ ಯೋಜನೆಗಳನ್ನು ರೂಪಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ‘ಕಾಯಕಲ್ಪ’ವನ್ನು ಪಡೆದಿದೆ ಎಂದು ಬಣ್ಣಿಸಿ ಡಿಸಂಬರ್ 20,21 ಮತ್ತು 22ರಂದು ಮಂಡ್ಯದಲ್ಲಿ ಅಯೋಜನೆಗೊಂಡರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸನ್ನು ಪಡೆಯಲು ಎಲ್ಲ ಕನ್ನಡಿಗರೂ ನೆರವು ನೀಡಬೇಕೆಂದು ಕೋರಿ ಕೊಂಡರು.

ಇನ್ನೊಬ್ಬ ಗೌರವ ಕಾರ್ಯದರ್ಶಿ ಡಾ.ಪದ್ಮಿನಿ ನಾಗರಾಜು ಅವರು ಮಾತನಾಡಿ ಕನ್ನಡವೆನ್ನುವುದು ಕೇವಲ ಭಾವನಾತ್ಮಕವಾಗಿ ಉಳಿದರೆ ಸಾಲದು ಗುಣಾತ್ಮಕವಾಗಿ ನಮ್ಮದಾಗ ಬೇಕು, ಕನ್ನಡದ ಅಸ್ಮಿತೆಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಗಳಾಗ ಬೇಕು ಎಂದು ಹೇಳಿ ಕನ್ನಡ ಸಾಹಿತ್ಯ ಪರಿಷತ್ತು ಈ ನಿಟ್ಟಿನಲ್ಲಿ ಕೈಗೊಂಡಿರುವ ಯೋಜನೆಗಳನ್ನು ವಿವರಿಸಿ ಇಡೀ ನವಂಬರ್ ತಿಂಗಳಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣೆಗಳನ್ನು ಶೇ 10ರಿಂದ ಶೇ 75ರವರೆಗೂ ರಿಯಾಯತಿ ದರದಲ್ಲಿ ಮಾರಾಟ ಮಾಡಲಾಗುವುದು ರಜಾ ದಿನಗಳಲ್ಲಿಯೂ ಈ ಸೌಲಭ್ಯವಿದ್ದು ಆಸಕ್ತರು ಇದನ್ನು ಸದುಪಯೋಗ ಪಡಿಸಿ ಕೊಳ್ಳ ಬೇಕೆಂದು ಕೋರಿ ಕೊಂಡರು.

ಕನ್ನಡ ಸಾಹಿತ್ಯ ಪರಿಷತ್ತಿನ ಸಿಬ್ಬಂದಿ ಮತ್ತು ಆಸಕ್ತ ಕನ್ನಡಿಗರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಎನ್.ಎಸ್.ಶ್ರೀಧರ ಮೂರ್ತಿ
ಸಂಚಾಲಕರು, ಪ್ರಕಟಣಾ ವಿಭಾಗ
ಕನ್ನಡ ಸಾಹಿತ್ಯ ಪರಿಷತ್ತು

ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ

ಪ್ರತಿಕ್ರಿಯೆ

ನಿಮ್ಮ ಇಮೇಲ್ ವಿಳಾಸವನ್ನು ನಾವು ಪಬ್ಲಿಷ್ ಮಾಡುವುದಿಲ್ಲ .


*


Enable Google Transliteration.(To type in English, press Ctrl+g)