ರಾಷ್ಟ್ರಕವಿ ಜಿ. ಎಸ್. ಶಿವರುದ್ರಪ್ಪನವರು
ಫೆಬ್ರವರಿ 7, 1926ರಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಹುಟ್ಟಿದ ಜಿ. ಎಸ್. ಶಿವರುದ್ರಪ್ಪ (ಜೀಯೆಸ್ಸೆಸ್) ಈ ನಾಡಿನಲ್ಲಿ ವ್ಯಾಪಕವಾಗಿ ಸಂಚರಿಸಿದ್ದವರು. ಪ್ರವಾಸ ಪ್ರೀತಿಯ ಜೀಯೆಸ್ಸೆಸ್ ಈ ಸುತ್ತುವಿಕೆಯಿಂದ ಬಹುಶ್ರುತತೆಯನ್ನು, ಸಮಚಿತ್ತವನ್ನು, ಜನಸಂಪರ್ಕವನ್ನು ಪಡೆದಿದ್ದರು. ಸೃಜನ, ವಿಮರ್ಶೆ, ಮೀಮಾಂಸೆ, ಅಧ್ಯಯನ, ಅಧ್ಯಾಪನ, ಆಡಳಿತ, ಸಂಘಟನೆ – ಈ ಮುಂತಾದ ಸಾಂಸ್ಕೃತಿಕ ನೆಲೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು, ಕನ್ನಡ ಸಂಸ್ಕೃತಿಯ ಚಲನಶೀಲತೆಗೆ ತಮ್ಮ ಕೊಡುಗೆ ನೀಡುತ್ತ ಬಂದ ಮುಖ್ಯರಲ್ಲಿ ಒಬ್ಬರಾಗಿದ್ದಾರೆ. ಡಾ. […]