ಜಿ.ಎಸ್. ಶಿವರುದ್ರಪ್ಪ
ಕನ್ನಡದ ರಾಷ್ಟ್ರಕವಿಗಳಲ್ಲಿ ಒಬ್ಬರಾಗಿ ವಿಮರ್ಶಕರು ಕವಿಗಳೆಂದು ಪ್ರಸಿದ್ಧರಾದ ಡಾ.ಜಿ.ಎಸ್. ಶಿವರುದ್ರಪ್ಪನವರು ಗುಗ್ಗುರಿ ಶಾಂತವೀರಪ್ಪ ಮತ್ತು ವೀರಮ್ಮನವರ ಪುತ್ರರಾಗಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ೭-೨-೧೯೨೬ರಲ್ಲಿ ಜನಿಸಿದರು. ಶಾಲಾ ಉಪಾಧ್ಯಾಯರ ಮಗನಾದ ಜಿ.ಎಸ್.ಎಸ್(ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ) ಅವರು ಎಸ್.ಎಸ್.ಎಲ್.ಸಿ ಮುಗಿಯುತ್ತಿದ್ದಂತೆಯೇ ಬಡತನದಿಂದಾಗಿ ಸರಕಾರಿ ನೌಕರಿ ಹಿಡಿದು ದುಡಿಯಲಾರಂಭಿಸಿದರು. ಗುಬ್ಬಿ ತಾಲ್ಲೂಕು ಕಚೇರಿಯಲ್ಲಿ […]